ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ: ಕಾಂಗ್ರೆಸ್ ಭರವಸೆ

ಅಸ್ಸಾಂನಲ್ಲಿ ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸುಶ್ಮಿತಾ ದೇವ್ ಹೇಳಿಕೆ‌
Last Updated 4 ಮಾರ್ಚ್ 2021, 9:47 IST
ಅಕ್ಷರ ಗಾತ್ರ

ಗುವಾಹಟಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ‘ಮಹಾಮೈತ್ರಿ ಕೂಟ‘ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುಶ್ಮಿತಾ ದೇವ್‌, ‌‌‘ಕಾಂಗ್ರೆಸ್‌ ನೇತೃತ್ವದ ಮಹಾ ಮೈತ್ರಿಕೂಟ ಮಹಿಳೆಯರು ಮತ್ತು ಯುವ ಸಮೂಹದ ಬಲವರ್ಧನೆಗೆ ಆದ್ಯತೆ ನೀಡುತ್ತಿದ್ದು, ಮೈತ್ರಿಕೂಟ ಸರ್ಕಾರ ರಚನೆಯಾದರೆ, ಸರ್ಕಾರಿ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡುವ ವಿಚಾರವನ್ನು ಆದ್ಯತೆಯಾಗಿ ಪರಿಗಣಿಸಲಿದೆ‘ ಎಂದು ಹೇಳಿದರು.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನೀಡಿರುವ ನೇರ ಹಣ ವರ್ಗಾವಣೆ ಸೇರಿದಂತೆ ವಿವಿಧ ಯೋಜನೆಗಳನ್ನು ಉಲ್ಲೇಖಿಸಿ ಮಾತನಾಡಿದ ದೇವ್, ‘ಅಸ್ಸಾಂನ ಯುವಕರು ಮತ್ತು ಮಹಿಳೆಯರು ದೇಣಿಗೆ ಬಯಸುವುದಿಲ್ಲ. ಅವರು ಉದ್ಯೋಗಾವಕಾಶಗಳನ್ನು ಬಯಸುತ್ತಾರೆ. ಜೊತೆಗೆ, ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಇಷ್ಟಪಡುತ್ತಾರೆ'ಎಂದು ದೇವ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT