ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ವಿತರಣೆ ಕುರಿತು ಇಂದು ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಮೋದಿ ಚರ್ಚೆ

Last Updated 11 ಜನವರಿ 2021, 4:33 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಕೋವಿಡ್‌ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.

ಜನವರಿ 11ರಂದು ಸಂಜೆ 4 ಗಂಟೆಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಯಲಿದ್ದು, ಎಲ್ಲಾ ರಾಜ್ಯಗಳ ಮುಖ್ಯಮುಂತ್ರಿಗಳು ಚರ್ಚೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್‌ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಲಾಗುವುದು. ಮೊದಲು 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್‌ ಲಸಿಕೆ ಹಾಕಲಾಗುವುದು. ಆ ಬಳಿಕ 50 ವರ್ಷ ಮೇಲ್ಪಟ್ಟ, 50 ವರ್ಷದೊಳಗಿನ(ಅನಾರೋಗ್ಯ ಪೀಡಿತ) 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿದೆ.

'ಕೋವಿಡ್‌ ಲಸಿಕೆ ವಿತರಣೆ ಅಭಿಯಾನದ ಮೂಲಕ ಸಾಂಕ್ರಾಮಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಭಾರತವು ಐತಿಹಾಸಿಕ ಹೆಜ್ಜೆ ಇಡಲಿದೆ' ಎಂಬ ಅಭಿಮತವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ.

ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್‌ ಸಂಸ್ಥೆಗಳಿಗೆ ತುರ್ತು ಪರಿಸ್ಥಿತಿಯಲ್ಲಿ ಷರತ್ತುಬದ್ಧ ಲಸಿಕೆ ಬಳಕೆಗೆ ಡಿಸಿಜಿಐ ಕಳೆದ ವಾರ ಅನುಮೋದನೆ ನೀಡಿದೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು 'ಕೋವಿಶೀಲ್ಡ್' ಲಸಿಕೆಯನ್ನು ಅಭಿವೃದ್ಧಿಪಡಿಸಿವೆ.

ಕಳೆದ 24 ಗಂಟೆಗಳಲ್ಲಿ 18,222 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ದೇಶದಾದ್ಯಂತ ಒಟ್ಟು ಕೋವಿಡ್‌ ಸೋಂಕಿತರ ಸಂಖ್ಯೆ 1,04,31,639ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT