ಸ್ವಗ್ರಾಮದಲ್ಲಿ ಅಹ್ಮದ್ ಪಟೇಲ್ ಅಂತ್ಯಕ್ರಿಯೆ

ಅಹಮದಾಬಾದ್: ಬುಧವಾರ ನಿಧನರಾದ ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್ ಗ್ರಾಮದಲ್ಲಿ ಗುರುವಾರ ಪಕ್ಷದ ಹಿರಿಯ ಮುಖಂಡರು ಮತ್ತು ಅಪಾರ ಸಂಖ್ಯೆಯ ಬೆಂಬಲಿಗರ ಸಮ್ಮುಖದಲ್ಲಿ ನೆರವೇರಿತು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
‘ಪಟೇಲ್ ಅವರ ಆಶಯಕ್ಕೆ ಅನುಗುಣವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಅವರ ತಾಯಿಯ ಗೋರಿ ಪಕ್ಕದಲ್ಲೇ ಅವರನ್ನೂ ದಫನ್ ಮಾಡಲಾಯಿತು‘ ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಶಿ ಹೇಳಿದರು.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ನಡುವೆಯೂ, ದಕ್ಷಿಣ ಗುಜರಾತ್‌ನ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಅವರ ಬೆಂಬಲಿಗರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.