ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮೊರ್ಬಿ ಭೇಟಿಗೆ ₹30 ಕೋಟಿ: ಸುಳ್ಳು ಸುದ್ದಿ ಹರಡಿದ ಟಿಎಂಸಿ ವಕ್ತಾರ ಬಂಧನ

Last Updated 6 ಡಿಸೆಂಬರ್ 2022, 14:24 IST
ಅಕ್ಷರ ಗಾತ್ರ

ಅಹಮದಾಬಾದ್‌: 135 ಜನರನ್ನು ಬಲಿ ತೆಗೆದುಕೊಂಡ ಮೊರ್ಬಿ ತೂಗು ಸೇತುವೆ ದುರಂತದಲ್ಲಿ ಬದುಕುಳಿದವರನ್ನು ಪ್ರಧಾನಿ ಮೋದಿ ಅವರು ಭೇಟಿಯಾಗಲು ₹30 ಕೋಟಿ ವ್ಯಯಿಸಲಾಗಿದೆ ಎಂದು ಸುಳ್ಳು ಸುದ್ದಿ ಟ್ವೀಟ್ ಮಾಡಿದ್ದ ಆರೋಪದ ಮೇಲೆತೃಣಮೂಲ ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಸಾಕೇತ್‌ ಗೋಖಲೆ ಅವರನ್ನು ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ಸೋಮವಾರ ರಾತ್ರಿ ಅಹಮದಾಬಾದ್‌ ಸೈಬರ್‌ ಸೆಲ್‌ ಪೊಲೀಸರು ಬಂಧಿಸಿದ್ದಾರೆ.

ಸಾಕೇತ್‌ ಅವರು ವದಂತಿ ಹರಡಿದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಇಂತಹ ಸುಳ್ಳು ಸುದ್ದಿಗಳನ್ನು ಹರಡುವವರಿಗೆ ಇದು ಎಚ್ಚರಿಕೆಯ ಗಂಟೆ ಎಂದು ಪೊಲೀಸರು ಹೇಳಿದ್ದಾರೆ.

ಸಾಕೇತ್‌ ಅವರನ್ನು ಇಲ್ಲಿನ ಮೆಟ್ರೊಪಾಲಿಟನ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸುಳ್ಳು ಸುದ್ದಿ ಹರಡಿದ ಟ್ವೀಟ್‌ ಸಂಬಂಧ ಮತ್ತಷ್ಟು ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಇದೇ ಗುರುವಾರದವರೆಗೆ ಸಾಕೇತ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.

ಅಹಮದಾಬಾದ್‌ನ ಶಾಹಿಬಾಗ್‌ ನಿವಾಸಿ, ಬಿಜೆಪಿ ಪದಾಧಿಕಾರಿ ಅಮಿತ್‌ ಬಾಲ್‌ಚಂದ್‌ ಕೊಠಾರಿ ಅವರು ನೀಡಿದ ದೂರಿನ ಮೇಲೆ ಎರಡು ದಿನಗಳ ಹಿಂದೆ ಎಫ್‌ಐಆರ್‌ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT