ಗುರುವಾರ , ಸೆಪ್ಟೆಂಬರ್ 29, 2022
26 °C

ಅಹಮದಾಬಾದ್ ಬಾಂಬ್ ದಾಳಿ: ಮರಣ ದಂಡನೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ 30 ದೋಷಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: 2008ರ ಅಹಮದಾಬಾದ್‌ ಸರಣಿ ಬಾಂಬ್‌ ದಾಳಿ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ 38 ದೋಷಿಗಳ ಪೈಕಿ 30 ಮಂದಿ ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಎಲ್ಲ ಅರ್ಜಿಗಳನ್ನು ಅಂಗೀಕರಿಸಿದ ನ್ಯಾಯಾಲಯ, ಅಪರಾಧಿಗಳ ಮರಣದಂಡನೆಯನ್ನು ದೃಢೀಕರಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿಗಳೊಂದಿಗೆ ಈ ಅರ್ಜಿಗಳ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ವಿ.ಎಂ.ಪಾಂಚೋಲಿ ಮತ್ತು ಎ.ಪಿ.ಥಾಕರ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈ ಅರ್ಜಿಗಳನ್ನು ಸ್ವೀಕರಿಸಿದೆ.

ಕಳೆದ ಫೆಬ್ರುವರಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ 38 ದೋಷಿಗಳಿಗೆ ಮರಣ ದಂಡಣೆ ವಿಧಿಸಿತ್ತು. ಉಳಿದ 11 ಮಂದಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. 2008ರಲ್ಲಿ ನಡೆದ ಸರಣಿ ಬಾಂಬ್‌ ದಾಳಿಯಲ್ಲಿ 56 ಮಂದಿ ಮೃತಪಟ್ಟು, 200 ಮಂದಿ ಗಾಯಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು