ಭಾನುವಾರ, ಜನವರಿ 16, 2022
28 °C

ಎಐಎಡಿಎಂಕೆ: ಡಿ. 7ರಂದು ಸಾಂಸ್ಥಿಕ ಚುನಾವಣೆ

ಪಿಟಿಐ Updated:

ಅಕ್ಷರ ಗಾತ್ರ : | |

ಚೆನ್ನೈ: ಓ.ಪನ್ನೀರ್‌ ಸೆಲ್ವಂ ಮತ್ತು ಕೆ.ಪಳನಿಸ್ವಾಮಿ ನಿರ್ವಹಿಸುತ್ತಿರುವ ಎಐಎಡಿಎಂಕೆ ಪಕ್ಷದ ಸಂಯೋಜಕ ಮತ್ತು ಜಂಟಿ ಸಂಯೋಜಕ ಹುದ್ದೆಗಳಿಗೆ ಡಿಸೆಂಬರ್‌ 7 ರಂದು ಚುನಾವಣೆ ನಡೆಯಲಿದೆ. 

ಪಕ್ಷದ ಬೈಲಾ ತಿದ್ದುಪಡಿ ಮಾಡಿದ ಮರುದಿನವೇ ಈ ಹುದ್ದೆಗಳಿಗೆ ಚುನಾವಣೆ ಘೋಷಿಸಲಾಗಿದೆ. ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾಗಿರುವ ಎಐಎಡಿಎಂಕೆ, ಸ್ಥಳೀಯ ಮಟ್ಟದ ವಿವಿಧ ಪದಾಧಿಕಾರಿಗಳ ಸ್ಥಾನಗಳಿಗೆ ಇದೇ ತಿಂಗಳಿನಲ್ಲಿ ಚುನಾವಣೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಐದು ವರ್ಷಗಳಿಗೊಮ್ಮೆ ಚುನಾವಣೆ ಕಡ್ಡಾಯಗೊಳಿಸಿರುವ ಪಕ್ಷದ ಕಾನೂನುಗಳಿಗೆ ಅನುಗುಣವಾಗಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು