ಸೋಮವಾರ, ಏಪ್ರಿಲ್ 19, 2021
32 °C

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: 28 ಮಂದಿ ಕಾಂಗ್ರೆಸ್‌ ವೀಕ್ಷಕರ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿಯು 28 ಮಂದಿ ಕಾಂಗ್ರೆಸ್‌ ವೀಕ್ಷಕರನ್ನು ನೇಮಕ ಮಾಡಿದೆ ಎಂದು ಹಿರಿಯ ನಾಯಕರೊಬ್ಬರು ಸೋಮವಾರ ತಿಳಿಸಿದರು.

‘ಗುಜರಾತ್‌, ರಾಜಸ್ತಾನ, ಮಧ್ಯಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನ ಕಾಂಗ್ರೆಸ್‌ ನಾಯಕರನ್ನು ವೀಕ್ಷಕರಾಗಿ ನೇಮಿಸಲಾಗಿದೆ. ಎಐಸಿಸಿಯು ಕೋಲ್ಕತ್ತ ಮತ್ತು ಬುರ್ರಾಬಜಾರ್ ಜಿಲ್ಲೆಗೆ ನಾಲ್ವರು ವೀಕ್ಷಕರು, ಉತ್ತರ 24 ಪರಗಣ ಮತ್ತು ದಕ್ಷಿಣ 24 ಪರಗಣದ ಜಿಲ್ಲೆಗಳಿಗೆ ತಲಾ ಇಬ್ಬರು ವೀಕ್ಷಕರನ್ನು ನೇಮಕ ಮಾಡಿದೆ. ಇತರೆ ಜಿಲ್ಲೆಗಳಿಗೆ ತಲಾ ಒಬ್ಬ ವೀಕ್ಷಕರನ್ನು ನಿಯೋಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಪಶ್ಚಿಮ ಬಂಗಾಳದ 294 ಸ್ಥಾನಗಳಿಗಾಗಿ ಮಾರ್ಚ್‌ 27 ಮತ್ತು ಏಪ್ರಿಲ್‌ 29ರ ನಡುವೆ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು