ಗುರುವಾರ , ಅಕ್ಟೋಬರ್ 21, 2021
21 °C

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ: ಇಂದು ಶಾಸಕಾಂಗ ಪಕ್ಷದ ಸಭೆ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಭಿನ್ನಮತ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಶನಿವಾರ ಪಂಜಾಬ್ ಕಾಂಗ್ರೆಸ್‌‌ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಂಜಾಬ್ ಉಸ್ತುವಾರಿ ಹರೀಶ್ ರಾವತ್ ತುರ್ತಾಗಿ ಪಂಜಾಬ್ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದಾರೆ.

ಇದನ್ನೂ ಓದಿ: 

ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಸಭೆಯು ಶನಿವಾರ ಸಂಜೆ 5 ಗಂಟೆಗೆ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆಯಲಿದೆ.

 

 

 

ಈ ಕುರಿತು ಟ್ವೀಟ್ ಮಾಡಿರುವ ಹರೀಶ್ ರಾವತ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಪಂಜಾಬ್ ಕಾಂಗ್ರೆಸ್‌ನ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಿಗೆ ಟ್ಯಾಗ್ ಮಾಡಿದ್ದಾರೆ.

 

ಸಿಧುಗೆ ಆಪ್ತರಾದ ಶಾಸಕರು ಮತ್ತು ಸಚಿವರು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲು ಬೇಡಿಕೆ ಇಟ್ಟಿದ್ದರು ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಕಳೆದ ತಿಂಗಳು ನಾಲ್ವರು ಸಚಿವರು ಮತ್ತು ಹಲವಾರು ಶಾಸಕರು ಅಮರಿಂದರ್ ಸಿಂಗ್ ವಿರುದ್ಧ ಬಂಡಾಯದ ಬಾವುಟವನ್ನು ಹಾರಿಸಿದ್ದರು. ಈಗ ಭಿನ್ನಮತ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ನಿರ್ಣಾಯಕ ಸಭೆ ಕರೆಯಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು