ಗುರುವಾರ , ಅಕ್ಟೋಬರ್ 22, 2020
21 °C
ಸುಶಾಂತ್ ಕುಟುಂಬದ ವಕೀಲ ವಿಕಾಸ್‌ ಸಿಂಗ್‌

'ಸುಶಾಂತ್ ಸಾವು ಆತ್ಮಹತ್ಯೆಯಲ್ಲ ಕೊಲೆ' ಎಂದಿದ್ದ ವೈದ್ಯರು: ವಕೀಲ ವಿಕಾಸ್ ಸಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಬಾಲಿವುಡ್ ನಟ‌ ಸುಶಾಂತ್ ಸಿಂಗ್ ರಜಪೂತ್‌ ಅವರದ್ದು ಆತ್ಮಹತ್ಯೆಯಲ್ಲ, ಅವರನ್ನು ಕುತ್ತಿಗೆ ಹಿಸುಕಿ ಸಾಯಿಸಲಾಗಿದೆ ಎಂದು ನಾನು ಕಳುಹಿಸಿದ ಸುಶಾಂತ್‌ ಫೋಟೊಗಳನ್ನು ನೋಡಿದ ಏಮ್ಸ್‌ ಆಸ್ಪತ್ರೆಯ ವೈದ್ಯರೊಬ್ಬರು ಬಹಳ ಹಿಂದೆಯೇ ಹೇಳಿದ್ದರು’ ಎಂದು ಸುಶಾಂತ್‌ ಸಿಂಗ್‌ ಕುಟುಂಬದ ವಕೀಲ ವಿಕಾಸ್ ಸಿಂಗ್ ನೆನಪಿಸಿಕೊಂಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಸುಶಾಂತ್‌ ಸಿಂಗ್ ರಜಪೂತ್ ಅವರ ಸಾವನ್ನು ಆತ್ಮಹತ್ಯೆ ಎಂದು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿ, ಅದನ್ನು ಕೊಲೆ ಎಂಬ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿದ್ದು, ಇದರಿಂದ ನಾನು ಹತಾಶಗೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು