ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲು ಪ್ರಸಾದ್ ಅನಾರೋಗ್ಯ: ಏರ್‌ ಆಂಬುಲೆನ್ಸ್‌ ಮೂಲಕ ದೆಹಲಿಗೆ

Last Updated 6 ಜುಲೈ 2022, 13:25 IST
ಅಕ್ಷರ ಗಾತ್ರ

ಪಟ್ನಾ: ಭುಜದ ಮೂಳೆ ಮುರಿತಕ್ಕೊಳಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜಡಿ ಅಧ್ಯಕ್ಷ ಲಾಲುಪ್ರಸಾದ್‌ ಯಾದವ್‌ ಅವರನ್ನು ಆರ್‌ ಆಂಬುಲೆನ್ಸ್‌ ಮೂಲಕ ದೆಹಲಿಗೆ ಕರೆದೊಯ್ಯಲಾಗುವುದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಭುಜದ ಮೂಳೆ ಮುರಿತಕ್ಕೊಳಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಅವರನ್ನು ಏರ್‌ ಆಂಬುಲೆನ್ಸ್‌ ಮೂಲಕ ದೆಹಲಿಗೆ ಕರೆದಒಯ್ಯಲಾಗುವುದು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಲಾಲು ಅವರು ಚಿಕಿತ್ಸೆ ಪಡೆಯುತ್ತಿರುವ ಇಲ್ಲಿನ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ‘ಲಾಲುಜಿ ಅವರು ಆಸ್ಪತ್ರಗೆ ದಾಖಲಾದ ನಂತರ ಅವರ ಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಕಂಡುಬರುತ್ತಿದೆ.ಆದರೆ, ಉತ್ತಮ ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯುವುದು ಒಳ್ಳೆಯದು.ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಲಾಲು ಅವರುನಿಯಮಾನುಸಾರ ವೈದ್ಯಕೀಯ ವೆಚ್ಚಕ್ಕಾಗಿ ರಾಜ್ಯ ಸರ್ಕಾರದಿಂದ ಸಹಾಯ ಪಡೆಯುತ್ತಾರೆ’ ಎಂದು ಹೇಳಿದರು.

‘ನನ್ನ ತಂದೆ ಆಸ್ಪತ್ರೆಗೆ ದಾಖಲಾದಾಗಿನಿಂದ ಮುಖ್ಯಮಂತ್ರಿಗಳು ಸಂಪರ್ಕದಲ್ಲಿದ್ದಾರೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ನರೇಂದ್ರ ಮೋದಿ ಅವರು ಕರೆ ಮಾಡಿ ತಂದೆಯವರ ಆರೋಗ್ಯ ವಿಚಾರಿಸಿದ್ದಾ‌ರೆ’ ಎಂದು ಲಾಲೂ ಅವರ ಮಗ ತೇಜಸ್ವಿ ಹೇಳಿದರು.

‘ಮೂತ್ರಪಿಂಡ ಕಸಿ ಮಾಡಲು ನಮ್ಮ ತಂದೆಯನ್ನು ಸಿಂಗಾಪುರಕ್ಕೆ ಕರೆದೊಯ್ಯುವ ಯೋಜನೆ ಇದೆ. ದೆಹಲಿಯ ವೈದ್ಯರು ಸೂಚಿಸುವ ಅಭಿಪ್ರಾಯವನ್ನು ನಾವು ಅನುಸರಿಸುತ್ತೇವೆ. ವೈದ್ಯರು ಅನುಮತಿ ನೀಡಿದರೆ ಅವರನ್ನು ವಿದೇಶಕ್ಕೆ ಕರೆದೊಯ್ಯಲು ಬಯಸುತ್ತೇವೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT