ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಮೇಲೆ ಬಾಂಬ್‌ ದಾಳಿ: ಕೊಲ್ಲುವುದೇ ಉದ್ದೇಶವಾಗಿತ್ತು ಎಂದ ಮಮತಾ

Last Updated 18 ಫೆಬ್ರುವರಿ 2021, 15:31 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಕಾರ್ಮಿಕ ಸಚಿವ ಜಾಕೀರ್‌ ಹುಸೇನ್‌ ಅವರನ್ನು ಕೊಲ್ಲುವುದೇ ದಾಳಿಕೋರರ ಉದ್ದೇಶವಾಗಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಸಚಿವ ಜಾಕೀರ್ ಹುಸೇನ್‌ ಮೇಲೆ ಬುಧವಾರ ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿತ್ತು. ದಾಳಿಯಲ್ಲಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, ತೃಣಮೂಲ ಕಾಂಗ್ರೆಸ್ ನಾಯಕನ ಜೊತೆಗಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ.

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಜಾಕೀರ್ ಅತ್ಯಂತ ಜನಪ್ರಿಯ ನಾಯಕರಾಗಿದ್ದಾರೆ. ಅವರನ್ನು ಕೊಲ್ಲುವುದೇ ದಾಳಿಕೋರರ ಉದ್ದೇಶವಾಗಿತ್ತು. ಈಗ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಯಲಿದೆ. ಪ್ರತಿಯೊಂದು ದಿಕ್ಕಿನಿಂದ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ' ಎಂದು ಅವರು ಹೇಳಿದ್ದಾರೆ.

ಜಾಕೀರ್ ಅವರು ಮುರ್ಷಿದಾಬಾದ್‌ನ ಜನಪ್ರಿಯ ನಾಯಕರಾಗಿದ್ದು, ರಾಜಕೀಯ ವೈರಿಗಳು ಅವರನ್ನು ಕೊಲೆಗೈಯಲು ಯತ್ನಿಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT