ನವದೆಹಲಿ: ಔಷಧೋಪಚಾರಗಳ ನೆರವಿಲ್ಲದೇಕೋವಿಡ್ 19 ವಿರುದ್ಧದ ಹೋರಾಡಲು ಸಮುದಾಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ (ಹರ್ಡ್ ಇಮ್ಯುನಿಟಿ) ಪ್ರಯತ್ನದಿಂದಸಮುದಾಯದಲ್ಲಿ ರೋಗದ ಪ್ರಮಾಣ ಉಲ್ಬಣಗೊಂಡು, ಸಾವಿನ ಪ್ರಮಾಣವೂ ಹೆಚ್ಚಾಗುವ ಅಪಾಯವಿದೆ ಎಂದು ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

‘ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡಲು ರಾಜ್ಯ ಸರ್ಕಾರಗಳು ಸಮುದಾಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ ಕ್ರಮಗಳನ್ನು ಅನುಸರಿಸುತ್ತಿವೆಯೇ' ಎಂದು ಕೇಳಿದ ಪ್ರಶ್ನೆಗೆ ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

‘ಕೋವಿಡ್19 ಸೋಂಕಿನ ಆರಂಭಿಕ ಹಂತದಲ್ಲಿ, ಕೆಲವು ದೇಶಗಳು ಸ್ವಾಭಾವಿಕವಾಗಿ ಸಮುದಾಯದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವಂತಹ ಪ್ರಕ್ರಿಯೆಗೆ ಅವಕಾಶ ನೀಡಿದ್ದವು. ಅಂಥ ದೇಶಗಳಲ್ಲಿ ಸೋಂಕು ಹರಡುವ ಪ್ರಮಾಣ ಹೆಚ್ಚಾಗಿ ಸಾವಿನ ಸಂಖ್ಯೆಯಲ್ಲೂ ಏರಿಕೆಯಾಯಿತು. ನಂತರ ಈ ವಿಧಾವನ್ನು ಅಲ್ಲಿ ಕೈಬಿಡಲಾಯಿತು‘ ಎಂದು ಚೌಬೆ ತಿಳಿಸಿದ್ದಾರೆ.

ಸೋಂಕು ಹರಡುವುದನ್ನು ನಿಯಂತ್ರಿಸುವುದಕ್ಕಾಗಿ ಆರೋಗ್ಯ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಯೋಜನೆಗಳು, ಕಾರ್ಯವಿಧಾನ ಗಳು, ಸಲಹೆಗಳನ್ನು ನೀಡಿದೆ. ಈ ಕ್ರಮಗಳನ್ನು ಅನುಸರಿಸುವುದರಿಂದ ಸೋಂಕು ಹರಡುವುದು ತಪ್ಪುತ್ತದೆ‘ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.