ಗುರುವಾರ , ಅಕ್ಟೋಬರ್ 22, 2020
22 °C

ಏಕರೂಪ ನಾಗರಿಕ ಸಂಹಿತೆ ವಿರುದ್ಧ ಜನಾಭಿಪ್ರಾಯಕ್ಕೆ ತೀರ್ಮಾನ: ಜಫರ್‌ಯಾಬ್‌ ಜಿಲಾನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಏಕರೂಪ ನಾಗರಿಕ ಸಂಹಿತೆ ವಿರುದ್ಧ ಜನಾಭಿಪ್ರಾಯ ರೂಪಿಸಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಕ್ರಮವಹಿಸಲಿದೆ ಎಂದು ಮಂಡಳಿಯ ಸದಸ್ಯ ಜಫರ್‌ಯಾಬ್‌ ಜಿಲಾನಿ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಜೊತೆಗೆ ಮಾತನಾಡಿದ ಅವರು, ಈ ಕುರಿತು ಅ. 11 ಮತ್ತು 13ರಂದು ನಡೆದ ಕಾರ್ಯನಿರ್ವಾಹಕ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಬಾಬರಿ ಮಸೀದಿ ನೆಲಸಮ ಪ್ರಕರಣ ಕುರಿತು ಚರ್ಚಿಸಲಾಯಿತು ಎಂದು ಅವರು ಹೇಳಿದರು.

ಬಿಜೆಪಿಯ ಕಾರ್ಯಸೂಚಿಯಲ್ಲಿ ಪ್ರಸ್ತುತ ಏಕರೂಪ ನಾಗರಿಕ ಸಂಹಿತೆ ವಿಷಯವಷ್ಟೇ ಉಳಿದುಕೊಂಡಿದ್ದು, ಆ ನಿಟ್ಟಿನಲ್ಲಿ ಅದು ಹೆಜ್ಜೆ ಇಡಬಹುದು ಎಂಬ ಅಭಿಪ್ರಾಯ ಮಂಡಳಿಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಅವರು ತಿಳಿಸಿದರು.

ಏಕರೂಪ ನಾಗರಿಕ ಸಂಹಿತೆಯಿಂದ ಬಾಧಿತರಾಗುವ ವಿವಿಧ ಸ್ತರದ ಸಮುದಾಯದ ಮುಖಂಡರ ಜೊತೆಗೂ ಮಂಡಳಿಯು ಚರ್ಚಿಸಲಿದೆ. ಭಾರತ ವಿವಿಧ ಸಂಸ್ಕೃತಿ ಮತ್ತು ನಾಗರಿಕತೆಯ ನೆಲೆವೀಡು. ಹೀಗಾಗಿ, ಏಕರೂಪ ನಾಗರಿಕ ಸಂಹಿತೆಯ ಜಾರಿ ಸಮರ್ಥನೀಯವಲ್ಲ ಎಂದು ಅವರು ಪ್ರತಿಪಾದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು