ಕೊಚ್ಚಿ: ಸುಮಾರು 1.4 ಕೆ.ಜಿ ಚಿನ್ನವನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಸಿಬ್ಬಂದಿಯನ್ನು ಕೊಚ್ಚಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಬಹರೇನ್– ಕೊಯಿಕೋಡ್– ಕೊಚ್ಚಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಸಿಬ್ಬಂದಿಯನ್ನು ಬುಧವಾರ ಬಂಧಿಸಿರುವ ಅಧಿಕಾರಿಗಳು, ಬಂಧಿತನು ತನ್ನ ಎರಡೂ ತೋಳಿನಲ್ಲಿ ಸುತ್ತಿಕೊಂಡಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಿಬ್ಬಂದಿಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಅಮಾನತುಗೊಳಿಸಿದೆ. ತನಿಖಾ ಅಧಿಕಾರಿಗಳ ವರದಿ ಕೈಸೇರಿದ ಬಳಿಕ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವಂತಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.