ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಯಾಣಿಕರಿಗಾಗಿ ಹೊಸ ಬದಲಾವಣೆ ಅಳವಡಿಸಿಕೊಂಡ ಏರ್ ಇಂಡಿಯಾ

Last Updated 28 ಮಾರ್ಚ್ 2023, 15:42 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಪ್ರಮುಖ ಏರ್‌ಲೈನ್ಸ್ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಅಂಗ ಸಂಸ್ಥೆಗಳಾದ ‘ಏರ್ ಇಂಡಿಯಾ ಎಕ್ಸ್‌ಪ್ರೆಸ್’ ಹಾಗೂ ‘ಏರ್ ಏಷ್ಯಾ ಇಂಡಿಯಾ’ಗಳಿಗೆ ಏಕೀಕೃತ ಟಿಕೆಟ್ ಬುಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ.

ಈ ನಿಯಮ ಶೀಘ್ರವೇ ಜಾರಿಗೆ ಬರಲಿದೆ. ಇದಕ್ಕಾಗಿ ಏಕೀಕೃತ airindiaexpress.com. ವೆಬ್‌ಸೈಟ್ ಕಾರ್ಯನಿರ್ವಹಿಸಲಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

ಇದುವರೆಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಹಾಗೂ ಏರ್ ಏಷಿಯಾ ಇಂಡಿಯಾಗಳಿಗೆ ಪ್ರತ್ಯೇಕವಾದ ಟಿಕೆಟ್ ಬುಕಿಂಗ್ ವ್ಯವಸ್ಥೆ ಇತ್ತು.

ಇತ್ತೀಚೆಗೆ ಏರ್‌ಏಷ್ಯಾವನ್ನು ಏರ್ ಇಂಡಿಯಾ ಖರೀದಿಸಿದ ನಂತರ ಸಂಸ್ಥೆಯಲ್ಲಿ ಇದು ಮಹತ್ವದ ಬದಲಾವಣೆಯಾಗಿದೆ. ಇದರಿಂದ ಪ್ರಯಾಣಿಕರಿಗೆ ತುಂಬಾ ಅನುಕೂಲ ಆಗಲಿದೆ ಎಂದು ಸಂಸ್ಥೆ ತಿಳಿಸಿದೆ.

ದೇಶೀಯ ಹಾಗೂ ಅಂತರರಾಷ್ಟ್ರೀಯ ಪ್ರಯಾಣದ ಟಿಕೆಟ್‌ಗಳನ್ನು ಬುಕ್ ಮಾಡುವುದಾಗಲಿ, ಕ್ಯಾನ್ಸಲ್ ಮಾಡುವುದಾಗಲಿ ಇತರೆ ಸೇವೆಗಳೆಲ್ಲವೂ ಈ ಏಕೀಕೃತ ವ್ಯವಸ್ಥೆಯಲ್ಲಿ ಇರಲಿವೆ ಎಂದು ಕಡಿಮೆ ಬೆಲೆಯಲ್ಲಿ ವಿಮಾನಯಾನ ಒದಗಿಸುವ ಮುಂಚೂಣಿ ಸಂಸ್ಥೆಯಾಗಿರುವ ಏರ್ ಇಂಡಿಯಾ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT