ನವದೆಹಲಿ: ಅಮೆರಿಕದ ನೆವಾರ್ಕ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಎಂಜಿನ್‌ವೊಂದರಲ್ಲಿ ಅನಿಲ ಸೋರಿಕೆಯಾಗುತ್ತಿದ್ದ ಕಾರಣ ಸ್ಟಾಕ್‌ಹೋಮ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಬುಧವಾರ ನಡೆದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ವೇಳೆ ವಿಮಾನದಲ್ಲಿ ಎಂಟು ಮಕ್ಕಳು ಸಿಬ್ಬಂದಿ ಸೇರಿ 292 ಪ್ರಯಾಣಿಕರಿದ್ದರು. ಈ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತನಿಖೆಗೆ ಆದೇಶಿಸಿದೆ ಎಂದು ತಿಳಿಸಿದ್ದಾರೆ.
‘ಬೋಯಿಂಗ್ 777–300ಇಆರ್ ವಿಮಾನದ ಎಂಜಿನ್‌ವೊಂದರಲ್ಲಿ ಅನಿಲ ಸೋರಿಕೆಯಾಗುತ್ತಿತ್ತು. ಇದರಿಂದ ಎಂಜಿನ್ ಸ್ಥಗಿತಗೊಂಡಿತ್ತು. ಹೀಗಾಗಿ ಸ್ವೀಡನ್‌ನ ಸ್ಟಾಕ್‌ಹೋಮ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು’ ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.