ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಬೆಂಗಳೂರಿನಲ್ಲಿ ಆರೋಪಿ ಬಂಧನ

Last Updated 7 ಜನವರಿ 2023, 6:50 IST
ಅಕ್ಷರ ಗಾತ್ರ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾ ಅವರನ್ನು ಶನಿವಾರ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಮಿಶ್ರಾ ಅವರನ್ನು ಬಂಧಿಸಿ ದೆಹಲಿಗೆ ಕರೆತರಲಾಗಿದೆ. ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಏರ್‌ ಇಂಡಿಯಾ ವಿಮಾನದ ಬಿಜಿನೆಸ್ ಕ್ಲಾಸ್‌ನಲ್ಲಿ ನ.26ರಂದು ಮಹಿಳೆ ಮೇಲೆ ಮಿಶ್ರಾ ಅವರು ಮೂತ್ರ ವಿಸರ್ಜಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ: ಆರೋಪಿ ಪತ್ತೆಗಾಗಿ ಪೊಲೀಸರ ಎರಡು ತಂಡ ಹುಡುಕಾಟ ನಡೆಸಿತ್ತು. ಒಂದು ಬೆಂಗಳೂರಿನಲ್ಲಿರುವ ಮಿಶ್ರಾ ಸಹೋದರಿ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರೆ, ಇನ್ನೊಂದು ತಂಡ, ಮುಂಬೈನಲ್ಲಿರುವ ಮಿಶ್ರಾ ತಂದೆ ಮನೆಗೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು. ಅಲ್ಲದೇ ಮಿಶ್ರಾ ವಿದೇಶ ಪ್ರಯಾಣ ಮಾಡದಂತೆ ಪೊಲೀಸರು ಲುಕ್ ಔಟ್‌ ಆದೇಶ ಹೊರಡಿಸಿದ್ದರು.

ಆರೋಪಿ ಕೆಲಸದಿಂದ ವಜಾ: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಎದುರಿಸುತ್ತಿರುವ ಮುಂಬೈ ಮೂಲದ ಶಂಕರ್ ಮಿಶ್ರಾ ಅವರನ್ನು ಅಮೆರಿಕದ ವೆಲ್ಸ್‌ ಫ್ರಾಗೋ ಸಂಸ್ಥೆ ಕೆಲಸದಿಂದ ವಜಾ ಮಾಡಿದೆ.

ಸಂಸ್ಥೆಯಲ್ಲಿ ಮಿಶ್ರಾ ವಿಷಯ ಬಹಳ ಚರ್ಚೆಗೆ ಗ್ರಾಸವಾಗಿದ್ದು, ಇದರಿಂದ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಸಂಸ್ಥೆ ಹೇಳಿದೆ.

ಎಚ್ಚರಿಕೆ: ಅಶಿಸ್ತು ಅಥವಾ ಅನುಚಿತವಾಗಿ ವರ್ತಿ ಸುವ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದರೆ ವಿಮಾನಯಾನ ಸಿಬ್ಬಂದಿ ಕ್ರಮ ಎದುರಿಸಬೇಕಾಗುತ್ತದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶನಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT