ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ : ಆರೋಪಿ ಶಂಕರ್ ಮಿಶ್ರಾಗೆ ಜಾಮೀನು

Last Updated 31 ಜನವರಿ 2023, 11:35 IST
ಅಕ್ಷರ ಗಾತ್ರ

ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತನಾಗಿದ್ದ ಶಂಕರ್ ಮಿಶ್ರಾ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ಜ್ಯೋತ್ ಸಿಂಗ್ ಭಲ್ಲಾ ಅವರು 1 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಿದ್ದಾರೆ.

ಜಾಮೀನು ನಿರಾಕರಿಸಿದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ವಿರುದ್ಧ ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಧೀಶರು ವಿಚಾರಣೆ ನಡೆಸಿದರು.

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜನವರಿ 11 ರಂದು ಮಿಶ್ರಾ ಅವರಿಗೆ ಜಾಮೀನು ನಿರಾಕರಿಸಿದ್ದರು. ಘಟನೆ ಅಸಹ್ಯಕರ ಮತ್ತು ವಿಕೃತಿಯಿಂದ ಕೂಡಿದೆ. ನಾಗರಿಕ ಪ್ರಜ್ಞೆಯನ್ನು ಆಘಾತಗೊಳಿಸಿದೆ ಎಂದು ನ್ಯಾಯಾಧೀಶರು ಅರ್ಜಿ ವಿಚಾರಣೆ ವೇಳೆ ಹೇಳಿದ್ದರು.

2022ರ ನವೆಂಬರ್ 26 ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಿಶ್ರಾ ಅವರು ಕುಡಿದ ಅಮಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT