ಮೂತ್ರ ವಿಸರ್ಜನೆ ಪ್ರಕರಣ : ಆರೋಪಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪ ಎದುರಿಸುತ್ತಿರುವ ಆರೋಪಿ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯ ಸೋಮವಾರ ಜ. 31ಕ್ಕೆ ಕಾಯ್ದಿರಿಸಿದೆ.
ಈ ಘಟನೆಯಿಂದಾಗಿ ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನಹಾನಿಯಾಗಿದೆ ಎಂದು ಪೊಲೀಸರು ಜಾಮೀನು ಅರ್ಜಿ ವಿರೋಧಿಸಿದ್ದಾರೆ.
‘ಇದು ಅಸಹ್ಯವಾಗಿರಬಹುದು. ಆದರೆ, ಅದು ಬೇರೆ ವಿಷಯ. ಕಾನೂನು ಅದನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ನೋಡೋಣ. ಪ್ರಾಸಿಕ್ಯೂಷನ್ ಹೆಸರಿಸಿರುವ ಸಾಕ್ಷಿಗಳು ‘ನಿಮ್ಮ (ಪೊಲೀಸರ) ಪರವಾಗಿ ಹಾಜರಾಗುತ್ತಿಲ್ಲ’ ಎಂದು ನ್ಯಾಯಮೂರ್ತಿಗಳು ಹೇಳಿದರು.
ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.