ಮಂಗಳವಾರ, ಮಾರ್ಚ್ 21, 2023
27 °C

ವಿಮಾನದಲ್ಲಿ ಅಶಿಸ್ತಿನ ವರ್ತನೆಗೆ ಕಠಿಣ ಶಿಕ್ಷೆ ಅಗತ್ಯ: ತಜ್ಞರ ಅಭಿಪ್ರಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ವಿಮಾನದಲ್ಲಿ ಪ್ರಯಾಣಿಕರ ಅಶಿಸ್ತಿನ ವರ್ತನೆಗೆ ಕಡಿವಾಣ ಹಾಕಬೇಕಾದರೆ ತ‍ಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವುದು ಅಗತ್ಯ’ ಎಂದು ಕಾನೂನು ಹಾಗೂ ವಿಮಾನಯಾನ ತಜ್ಞರು ಸೋಮವಾರ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವರ್ಷದ ನವೆಂಬರ್ 26ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದ ಬ್ಯುಸಿನೆಸ್ ಕ್ಲಾಸ್‌ನಲ್ಲಿ ಪ್ರಯಾಣಿಸುತ್ತಿದ್ದ 70 ವರ್ಷದ ಮಹಿಳೆ ಮೇಲೆ ಮದ್ಯದ ಅಮಲಿನಲ್ಲಿದ್ದ ಆರೋಪಿ ಶಂಕರ್‌ ಮಿಶ್ರಾ ಎಂಬಾತ ಮೂತ್ರ ವಿಸರ್ಜನೆ ಮಾಡಿದ್ದ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.

‘ವಾಣಿಜ್ಯ ಉದ್ದೇಶದಿಂದಾಗಿ ವಿಮಾನಯಾನ ಸಂಸ್ಥೆಗಳು ಇಂತಹ ಪ್ರಕರಣಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತವೆ. ಹೀಗಾಗಿಯೇ ವಿಮಾನ ಪ್ರಯಾಣಿಕರ ಅನುಚಿತ ವರ್ತನೆಗೆ ಸಂಬಂಧಿಸಿದ ಪ್ರಕರಣಗಳು ಹೆಚ್ಚುತ್ತಲೇ ಇವೆ’ ಎಂದು ತಜ್ಞರು ಹೇಳಿದ್ದಾರೆ.

‘ಮುಂದೆ ಇಂತಹ ಅಹಿತಕರ ಘಟನೆಗಳು ಮರುಕಳಿಸದಿರಲು ‘ನಾಗರಿಕ ವಿಮಾನಯಾನ ಅವಶ್ಯಕತೆಗಳು–2017ರ ನೀತಿ’ಗೆ ತಿದ್ದುಪಡಿ ತರಬೇಕು. ಈ ನೀತಿಯ ಅಡಿಯಲ್ಲಿ ಅನುಚಿತ ವರ್ತನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಿಸುವುದನ್ನು ಕಡ್ಡಾಯಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು