ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಬೆಂಗಳೂರಿಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ– ತುರ್ತು ಭೂಸ್ಪರ್ಶ

Last Updated 20 ಮೇ 2022, 8:24 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರಿಗೆ ಹೊರಟಿದ್ದ ಟಾಟಾ ಗ್ರೂಪ್‌ನ ಏರ್ ಇಂಡಿಯಾದ ಎ320ನಿಯೊ ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ತಾಂತ್ರಿಕ ದೋಷದಿಂದ ಮುಂಬೈ ವಿಮಾನನಿಲ್ದಾಣಕ್ಕೆ ಮರಳಿರುವ ಘಟನೆ ಗುರುವಾರ ನಡೆದಿದೆ.

ವಿಮಾನದ ಎಂಜಿನ್‌ಗಳ ಪೈಕಿ ಒಂದು ಎಂಜಿನ್ ಅನ್ನು ತಾಂತ್ರಿಕ ದೋಷದಿಂದಾಗಿ ಆಗಸದಲ್ಲೇ ಸ್ಥಗಿತಗೊಳಿಸಲಾಗಿತ್ತು ಎಂದು ಮೂಲಗಳು ಶುಕ್ರವಾರ ತಿಳಿಸಿವೆ.

ಪರ್ಯಾಯ ವಿಮಾನದ ಮೂಲಕ ಪ್ರಯಾಣಿಕರನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಘಟನೆ ಕುರಿತಂತೆ, ನಾಗರಿಕ ವಿಮಾನಯಾನ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ಬೆಳಿಗ್ಗೆ 9.43ಕ್ಕೆ ವಿಮಾನವು ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ನಿಮಿಷಗಳ ನಂತರ ಇಂಜಿನ್‌ಗಳಲ್ಲಿ ಹೆಚ್ಚಿನ ತಾಪಮಾನದ ಬಗ್ಗೆ ಪೈಲಟ್‌ಗಳಿಗೆ ಎಚ್ಚರಿಕೆ ಸಂದೇಶ ಬಂದಿದೆ. ಬಳಿಕ ಒಂದು ಎಂಜಿನ್ ಸ್ಥಗಿತಗೊಳಿಸಿದ ಪೈಲಟ್‌, ವಿಮಾನವನ್ನು ಬೆಳಿಗ್ಗೆ 10.10ರ ಸುಮಾರಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಳಿಸಿದ್ದಾರೆ.

‘ಏರ್ ಇಂಡಿಯಾ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತದೆ ಮತ್ತು ನಮ್ಮ ಸಿಬ್ಬಂದಿ ಇಂತಹ ಸಂದರ್ಭಗಳನ್ನು ನಿಭಾಯಿಸುವುದರಲ್ಲಿ ನಿಪುಣರಾಗಿದ್ದಾರೆ. ನಮ್ಮ ಇಂಜಿನಿಯರಿಂಗ್ ಮತ್ತು ನಿರ್ವಹಣೆ ತಂಡಗಳು ತಕ್ಷಣವೇ ಸಮಸ್ಯೆಯನ್ನು ಪರಿಶೀಲಿಸಲು ಪ್ರಾರಂಭಿಸಿದ್ದವು’ ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT