ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣದಲ್ಲಿ ವಾಯು ಮಾಲಿನ್ಯ: 17 ರವರೆಗೆ ಶಾಲೆಗಳು, ನಿರ್ಮಾಣ ಚಟುವಟಿಕೆ ಬಂದ್

Last Updated 14 ನವೆಂಬರ್ 2021, 14:25 IST
ಅಕ್ಷರ ಗಾತ್ರ

ಚಂಡೀಗಡ: ‌ಹರಿಯಾಣದಲ್ಲಿ ವಾಯು ಮಾಲಿನ್ಯ ಮಿತಿಮೀರಿದ್ದು, ಗಾಳಿಯ ಗುಣಮಟ್ಟ ಸುಧಾರಿಸುವ ಉದ್ದೇಶದಿಂದ ಎಲ್ಲಾ ಶಾಲೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿಲ್ಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಗುರುಗ್ರಾಮ, ಫರಿದಾಬಾದ್, ಸೋನಿಪತ್ ಮತ್ತು ಜಜ್ಜರ್‌ ಜಿಲ್ಲೆಗಳಿಗೆ ಅನ್ವಯವಾಗುವಂತೆ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಈ ಜಿಲ್ಲೆಗಳಲ್ಲಿ ನ.17 ರವರೆಗೆ ಶಾಲೆಗಳನ್ನು ಮುಚ್ಚುವುದು, ಕಟ್ಟಡ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು, ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಗಳಿಗೆ ವರ್ಕ್‌ ಫ್ರಮ್‌ ಹೋಮ್ ಮಾಡುವಂತೆ ಸರ್ಕಾರ ಸಲಹೆ ನೀಡಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಮಿತಿಮೀರಿದ್ದು, ಗಾಳಿಯ ಗುಣಮಟ್ಟ ಸುಧಾರಿಸಲು ಅಗತ್ಯವಿದ್ದಲ್ಲಿ ನಗರದಲ್ಲಿ ಎರಡು ದಿನ ಲಾಕ್‌ಡೌನ್‌ ಘೋಷಿಸುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಶನಿವಾರ ಸಲಹೆ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT