ಶನಿವಾರ, ಡಿಸೆಂಬರ್ 5, 2020
21 °C

ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಾಯುಮಾಲಿನ್ಯ ಅಡ್ಡಿ: ವಿಜ್ಞಾನಿಗಳ ಅಭಿಪ್ರಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಭಾರತದ ಕೋವಿಡ್‌ ವಿರುದ್ಧದ ಹೋರಾಟಕ್ಕೆ ವಾಯು ಮಾಲಿನ್ಯವು ಅಡ್ಡಿಯಾಗುತ್ತಿದೆ’ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ವಾಯು ಮಾಲಿನ್ಯ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದಲೇ ಕೊರೊನಾ ಸೋಂಕಿತರು ಹಾಗೂ ಕೋವಿಡ್‌ನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ ಎಂದು ಈಗಾಗಲೇ ಹಲವು ಸಂಶೋಧನೆಗಳು ತಿಳಿಸಿವೆ.

ನವದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚಿದೆ. ಕಲುಷಿತ ಹೊಗೆಯಿಂದಾಗಿ ಗಾಳಿಯ ಗುಣಮಟ್ಟವು ಕ್ಷಿಪ್ರಗತಿಯಲ್ಲಿ ಕುಸಿಯುತ್ತಿದೆ ಎಂದು ಅಮೆರಿಕದ ಹಾರ್ವರ್ಡ್‌ ವಿಶ್ವವಿದ್ಯಾಲಯದ ಸಂಶೋಧಕರು ಎಚ್ಚರಿಸಿದ್ದಾರೆ.

ಹಾರ್ವಡ್‌ ವಿಶ್ವವಿದ್ಯಾಲಯವು ಸೆಪ್ಟೆಂಬರ್‌ನಲ್ಲಿ ಅಧ್ಯಯನ ಕೈಗೊಂಡಿತ್ತು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು