ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ಡೌನ್ ಮುನ್ಸೂಚನೆ ನೀಡಿದ ಡಿಸಿಎಂ ಅಜಿತ್‌ ಪವಾರ್

ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳ
Last Updated 22 ನವೆಂಬರ್ 2020, 12:11 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಹೆಚ್ಚು ಜನಸಂದಣಿ ಪ್ರದೇಶಗಳಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಗೊಳಿಸುವ ಕುರಿತು ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಮುನ್ಸೂಚನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೀಪಾವಳಿ ಮತ್ತು ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಮಾರುಕಟ್ಟೆ ಪ್ರದೇಶಗಳಲ್ಲಿ ಭಾರಿ ಜನಸಂದಣಿ ಸೇರಿದನ್ನು ನಾವು ನೋಡಿದ್ದೇವೆ. ಈ ಕುರಿತು ಸಂಬಂಧಿತ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ಮುಂದಿನ 8-10 ದಿನಗಳವರೆಗೆ ಪರಿಸ್ಥಿತಿಯನ್ನು ಪರಿಶೀಲಿಸುತ್ತೇವೆ. ಬಳಿಕ ಲಾಕ್‌ಡೌನ್‌ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.

‘ಕೋವಿಡ್‌ ಎರಡನೇ ಅಲೆ ಇರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಶಾಲೆಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರ ಹಲವು ನಿಯಮಗಳನ್ನು ಜಾರಿಗೊಳಿಸುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT