ಮಂಗಳವಾರ, ಫೆಬ್ರವರಿ 7, 2023
26 °C
ಡಿ.6ರಂದು ಹನುಮಾನ್ ಚಾಲಿಸಾ ಪಠಣ

ಶಾಹಿ ದರ್ಗಾದಲ್ಲಿ ಹನುಮಾನ್ ಚಾಲಿಸಾ ಪಠಣ: ಅಖಿಲ ಭಾರತ ಹಿಂದೂ ಮಹಾಸಭಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಶಾಹಿ ಈದ್ಗಾ ಮಸೀದಿಯಲ್ಲಿ ಹನುಮಾನ್ ಚಾಲಿಸಾ ಪಠಿಸಲಿದ್ದೇನೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ನಾಯಕಿ ರಾಜ್ಯಶ್ರೀ ಚೌಧರಿ ಹೇಳಿಕೆ ನೀಡಿದ್ದಾರೆ.

ಬಾಬ್ರಿ ಮಸೀದಿ ಧ್ವಂಸಗೊಳಿಸಿದ 30ನೇ ವರ್ಷಾಚರಣೆಯ ದಿನವಾದ ಡಿಸೆಂಬರ್ 6ರಂದು ಹನುಮಾನ್ ಚಾಲಿಸಾವನ್ನು ಪಠಿಸಲು ಅವರು ನಿರ್ಧರಿಸಿದ್ದಾರೆ.

ಕಳೆದ ವರ್ಷವೇ ಶಾಹಿ ಈದ್ಗಾದಲ್ಲಿ ಹನುಮಾನ್‌ ಚಾಲಿಸಾ ಪಠಿಸಲು ನಿರ್ಧರಿಸಿದ್ದೆ. ಆದರೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಅಡಚಣೆ ಉಂಟಾಗಿದ್ದರಿಂದ ಹನುಮಾನ್ ಚಾಲಿಸಾ ಪಠಿಸಲು ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಆದರೆ ಈ ಬಾರಿ ಹನುಮಾನ್ ಚಾಲಿಸಾ ಪಠಿಸುವುದು ನಿಶ್ಚಿತ ಎಂದು ರಾಜ್ಯಶ್ರೀ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು