ಸೋಮವಾರ, ಮಾರ್ಚ್ 20, 2023
30 °C

ಸಿಎಎ ವಿರೋಧಿ ಹೋರಾಟ: ಅಖಿಲ್‌ ಗೋಗೊಯಿಯನ್ನು ಆರೋಪ ಮುಕ್ತಗೊಳಿಸಿದ ಎನ್‌ಐಎ ಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗುವಾಹಟಿ: ಅಸ್ಸಾಂನಲ್ಲಿ ನಡೆದ ಸಿಎಎ ವಿರೋಧಿ ಹೋರಾಟ ಸಂದರ್ಭದಲ್ಲಿನ ಹಿಂಸಾಚಾರದಲ್ಲಿ ಭಾಗಿಯಾದ ಆರೋಪದಡಿ ಬಂಧನಕ್ಕೊಳಗಾಗಿದ್ದ ಶಾಸಕ ಅಖಿಲ್‌ ಗೋಗೊಯಿ ಅವರನ್ನು ಎನ್‌ಐಎ ವಿಶೇಷ ನ್ಯಾಯಾಲಯ ಎಲ್ಲ ಆರೋಪಗಳಿಂದ ಗುರುವಾರ ಮುಕ್ತಗೊಳಿಸಿತು.

ಅವರು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಗುವಾಹಟಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯಾಯಾಲಯವು ತೀರ್ಪಿನ ಪ್ರತಿಯನ್ನು ಗುವಾಹಟಿ ಸೆಂಟ್ರಲ್‌ ಜೈಲಿಗೆ ಕಳುಹಿಸಿತು. ಹೀಗಾಗಿ ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದರು.

ಅಖಿಲ್ ಅವರು ಪಕ್ಷೇತರ ಶಾಸಕರಾಗಿದ್ದು, ಶಿವಸಾಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು