ಭಾನುವಾರ, ನವೆಂಬರ್ 27, 2022
26 °C

ಮೂರನೇ ಬಾರಿಗೆ ಎಸ್‌ಪಿ ಅಧ್ಯಕ್ಷರಾಗಿ ಅಖಿಲೇಶ್‌ ಯಾದವ್ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಸತತ ಮೂರನೇ ಅವಧಿಗೆ ಅವಿರೋಧವಾಗಿ ಸಮಾಜವಾದಿ ಪಕ್ಷದ ಅಧ್ಯಕ್ಷರಾಗಿ ಅಖಿಲೇಶ್ ಯಾದವ್‌ ಅವರು ಗುರುವಾರ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್‌ ಗೋಪಾಲ್ ಯಾದವ್ ತಿಳಿಸಿದ್ದಾರೆ.

ಇಲ್ಲಿನ ರಮಾಬಾಯಿ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಸಮಾಜವಾದಿ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಚುನಾವಣಾ ಫಲಿತಾಂಶ ಪ್ರಕಟಿಸಿದ ರಾಮ್‌ ಗೋಪಾಲ್ ಯಾದವ್, ಅಧ್ಯಕ್ಷ ಸ್ಥಾನಕ್ಕೆ ಅಖಿಲೇಶ್‌ ಒಬ್ಬರೇ ಅಭ್ಯರ್ಥಿ ಎಂದರು. 

2017ರಲ್ಲಿ ನಡೆದ ಪಕ್ಷದ ತುರ್ತು ಸಭೆಯಲ್ಲಿ ಮೊದಲ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಸಮ್ಮೇಳನದಲ್ಲಿ ಎರಡನೇ ಅವಧಿಗೆ ಆಯ್ಕೆಯಾಗಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು