ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಅಖಿಲೇಶ್ ಯಾದವ್

ಲಖನೌ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ತಿಳಿಸಿದ್ದಾರೆ.
ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಪಕ್ಷದ ಮೈತ್ರಿಯೊಂದಿಗೆ ಈ ಚುನಾವಣೆ ಎದುರಿಸುವುದು ಅಂತಿಮಗೊಂಡಿದೆ ಎಂದು ಅವರು ಹೇಳಿದರು.
‘ಆರ್‌ಎಲ್‌ಡಿ ಪಕ್ಷದೊಂದಿಗೆ ನಮ್ಮ ಪಕ್ಷ ಮೈತ್ರಿ ಮಾಡಿಕೊಳ್ಳುವ ವಿಚಾರ ಅಂತಿಮಗೊಂಡಿದೆ. ಸೀಟು ಹಂಚಿಕೆ ಮಾತ್ರ ಬಾಕಿ ಉಳಿದಿದೆ‘ ಎಂದು ಅಖಿಲೇಶ್ ಅವರು ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಅಜಮ್‌ಗಡ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಎಸ್‌ಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತಗೊಂಡಿದ್ದ ಅಖಿಲೇಶ್ ಯಾದವ್, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.