ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ರಾಸ್‌ ಅತ್ಯಾಚಾರ ಪ್ರಕರಣ: ಉತ್ತರ ಪ್ರದೇಶದಲ್ಲಿ ತೀವ್ರಗೊಂಡ ಪ್ರತಿಭಟನೆ

Last Updated 1 ಅಕ್ಟೋಬರ್ 2020, 10:34 IST
ಅಕ್ಷರ ಗಾತ್ರ

ಲಖನೌ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿದ್ದ ಯುವತಿಯ ಅಂತ್ಯಕ್ರಿಯೆಯನ್ನು ತುರಾತುರಿಯಲ್ಲಿ ನೇರವೇರಿಸಿದ ಉತ್ತರ ಪ್ರದೇಶ ಪೊಲೀಸರ ವಿರುದ್ಧ ಸಮಾಜವಾದಿ ಪಕ್ಷವು ಪ್ರತಿಭಟನೆ ನಡೆಸುತ್ತಿದೆ.

ಮೃತಪಟ್ಟಿರುವ 19 ವರ್ಷದ ದಲಿತ ಯುವತಿಯ ಗ್ರಾಮಕ್ಕೆ ಪ್ರವೇಶಿಸಲು ಯತ್ನಿಸಿರುವ ಸಮಾಜವಾದಿ ಪಕ್ಷದ ಕಾರ್ಯಕರ್ತರನ್ನು ತಡೆಯಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾರ್ಯಕರ್ತರು ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಧರಣಿ ನಡೆಸುತ್ತಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಮಾಜವಾದಿ ಪಕ್ಷದ ನಾಯಕ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌, 'ಸರ್ಕಾರದ ಆದೇಶದ ಮೇರೆಗೆ ಹತ್ರಾಸ್ ಸಂತ್ರಸ್ತೆಯ ಕುಟುಂಬದ ಮೇಲೆ ಹಲವಾರು ಬಾರಿ ಹಲ್ಲೆ ಮಾಡಲಾಗಿದೆ. ಈಗ ಜನರು ಅಂತಹ ಸರ್ಕಾರದಿಂದಲೇ ನ್ಯಾಯ ದೊರಕಿಸಿಕೊಳ್ಳಲು ನಿರ್ಧರಿಸಿದ್ದಾರೆ. ಆಡಳಿತ ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಿಜೆಪಿಯ ನಿಜ ಬಣ್ಣವನ್ನು ಜನರು ನೋಡುತ್ತಿದ್ದಾರೆ. ಕ್ರೂರಿಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎರಡು ವಾರಗಳ ಹಿಂದೆ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದ ಉತ್ತರ ಪ್ರದೇಶದ ಹತ್ರಾಸ್‌ನ 19 ವರ್ಷದ ಯುವತಿ ದೆಹಲಿಯಲ್ಲಿ ಮಂಗಳವಾರ ಮೃತಪಟ್ಟಿದ್ದರು. ಮೂಳೆ ಮುರಿತ ಮತ್ತು ನಾಲಿಗೆಯು ತುಂಡಾಗಿದ್ದ ಯುವತಿ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದರು.

ಘಟನೆ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ಆರಂಭದಲ್ಲಿ ಸಹಾಯ ಮಾಡಲಿಲ್ಲ. ಆದರೆ, ಸಾರ್ವಜನಿಕರ ಆಕ್ರೋಶದ ನಂತರ ಪ್ರತಿಕ್ರಿಯಿಸಿದರು ಎಂದು ಮಹಿಳೆಯ ಕುಟುಂಬ ಆರೋಪಿಸಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT