ಭಾನುವಾರ, ಜುಲೈ 3, 2022
27 °C

ಉತ್ತರ ಪ್ರದೇಶ: ಸಂಸದ ಸ್ಥಾನಕ್ಕೆ ಎಸ್‌ಪಿ ನಾಯಕ ಅಖಿಲೇಶ್ ಯಾದವ್ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿರುವ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಅಖಿಲೇಶ್ ಯಾದವ್ ಅವರು ಅಜಮ್‌ಘಡ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ದಾಖಲಿಸಿದ್ದಾರೆ.

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರು, ಬಿಜೆಪಿಯ ಎಸ್‌.ಪಿ ಸಿಂಗ್ ಬಘೇಲ್ ಎದುರು 66,782 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕರ್ಹಾಲ್‌ನಲ್ಲಿ ಸಮಾಜವಾದಿ ಪಕ್ಷವು 1993ರಿಂದ ಸತತವಾಗಿ ಗೆಲ್ಲುತ್ತಾ ಬಂದಿತ್ತು. ಆದರೆ, 2002ರಲ್ಲಿ ಮಾತ್ರ ಇಲ್ಲಿ ಬಿಜೆಪಿ ಅಭ್ಯರ್ಥಿ ಗೆದ್ದಿದ್ದರು.

ಅಜಮ್‌ಘಡದ ಸಂಸದರಾಗಿರುವ ಅಖಿಲೇಶ್‌ ಯಾದವ್‌ 2012, 2017ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. 2012ರಲ್ಲಿ ಮುಖ್ಯಮಂತ್ರಿಯಾಗಬೇಕಾದ ಸಂದರ್ಭ ಒದಗಿ ಬಂದಾಗ ಕನೌಜ್‌ನ ಸಂಸದರಾಗಿದ್ದ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನಪರಿಷತ್‌ ಪ್ರವೇಶಿಸಿದ್ದರು.

2022ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದ ಅಖಿಲೇಶ್‌ ಯಾದವ್‌, ಸಿಎಂ ಯೋಗಿ ಆದಿತ್ಯನಾಥ್‌ ಅವರು ಚುನಾವಣೆ ಕಣಕ್ಕೆ ಧುಮುಕುತ್ತಲೇ ತಾವೂ ಕೂಡ ಸ್ಪರ್ಧೆ ಮಾಡುವ ತೀರ್ಮಾನ ಕೈಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು