ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

29ರಂದು ಎಸ್‌ಪಿ ರಾಷ್ಟ್ರೀಯ ಸಮ್ಮೇಳನ: ಅಧ್ಯಕ್ಷರಾಗಿ ಅಖಿಲೇಶ್‌ ಆಯ್ಕೆ ಬಹುತೇಕಖಚಿತ

Last Updated 27 ಸೆಪ್ಟೆಂಬರ್ 2022, 13:43 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ರಾಷ್ಟ್ರೀಯ ಸಮಾವೇಶವು ಗುರುವಾರ ಇಲ್ಲಿ ನಡೆಯಲಿದ್ದು, ಪಕ್ಷವನ್ನು 2024ರ ಲೋಕಸಭೆ ಚುನಾವಣೆಗೆ ಮುನ್ನಡೆಸುವ ನಿಟ್ಟಿನಲ್ಲಿ ಎಸ್‌ಪಿ ನಾಯಕ ಅಖಿಲೇಶ್‌ ಯಾದವ್‌ ಅವರು ಸತತ ಮೂರನೇ ಬಾರಿಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಆಗುವ ಸಾಧ್ಯತೆ ದಟ್ಟವಾಗಿದೆ.

ರಾಷ್ಟ್ರೀಯ ಸಮ್ಮೇಳನಕ್ಕೂ ಮೊದಲು, ಎಸ್‌ಪಿ ರಾಜ್ಯ ಮಟ್ಟದ ಸಮ್ಮೇಳನವನ್ನುಬುಧವಾರ ಆಯೋಜಿಸಲಾಗಿದೆ. ಪಕ್ಷದಉತ್ತರ ಪ್ರದೇಶ ಘಟಕದ ಅಧ್ಯಕ್ಷರನ್ನು ಈ ವೇಳೆ ಆಯ್ಕೆ ಮಾಡಲಾಗುವುದು. ಎಸ್‌ಪಿ ಅಧ್ಯಕ್ಷರ ಅಯ್ಕೆ ಜೊತೆಗೆ ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭೆ ಚುನಾವಣೆಗೆ ತಂತ್ರ ರೂಪಿಸುವುದೂ ಸಮ್ಮೇಳನದ ಪ್ರಮುಖ ವಿಷಯವಾಗಲಿದೆಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿಯನ್ನು ಪರಿಣಾಮಕಾರಿಯಾಗಿ ಎದುರಿಸುವ ಕುರಿತೂ ಸಮ್ಮೇಳನದಲ್ಲಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.

ರಮಾಬಾಯಿ ಅಂಬೇಡ್ಕರ್‌ ರ‍್ಯಾಲಿ ಮೈದಾನದಲ್ಲಿ ಈ ಸಮ್ಮೇಳನಗಳು ನಡೆಯಲಿವೆ. ಪಕ್ಷದ ಸುಮಾರು 25,000 ಪ್ರತಿನಿಧಿಗಳು ಸಮ್ಮೇಳನಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಎಸ್‌ಪಿ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ಅವರು ತಿಳಿಸಿದ್ದಾರೆ.

2017ರ ಜನವರಿಯಲ್ಲಿ ಅಖಿಲೇಶ್‌ ಯಾದವ್‌ ಅವರು ಎಸ್‌ಪಿ ಅಧ್ಯಕ್ಷರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT