ಬುಧವಾರ, ಡಿಸೆಂಬರ್ 2, 2020
17 °C

ಪಶ್ಚಿಮ ಬಂಗಾಳ ಭಯೋತ್ಪಾಕರ ಕೇಂದ್ರವಾಗಿ ಮಾರ್ಪಟ್ಟಿದೆ: ಬಿಜೆಪಿ ರಾಜ್ಯಾಧ್ಯಕ್ಷ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಕೋಲ್ಕತಾ: ಪಶ್ಚಿಮ ಬಂಗಾಳವು ಭಯೋತ್ಪಾದಕರ ಕೇಂದ್ರವಾಗಿ ಮಾರ್ಪಟ್ಟಿದ್ದು, ಇಲ್ಲಿನ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದ್ದಾಗಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌ ಘೋಷ್‌ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿರುವ ಅವರು, 'ಇತ್ತೀಚೆಗೆ ಅಲ್‌-ಖೈದಾ ಸಂಘಟನೆಯ ಉಗ್ರರನ್ನು ಪಶ್ಚಿಮ ಬಂಗಾಳದ ಕೂಚ್‌ಬೆಹರ್‌ನಲ್ಲಿ ಗುರುತಿಸಲಾಗಿದೆ. ಅವರ ಜಾಲ ಪಶ್ಚಿಮ ಬಂಗಾಳದಲ್ಲಿ ಬೆಳೆಯುತ್ತಿದೆ. ರಾಜ್ಯವು ಭಯೋತ್ಪಾದಕರ ಕೇಂದ್ರವಾಗಿ ಮಾರ್ಪಟ್ಟಿದೆ. ಇಲ್ಲಿನ ಸ್ಥಿತಿ ಕಾಶ್ಮೀರಕ್ಕಿಂತ ಕೆಟ್ಟದ್ದಾಗಿದೆ' ಎಂದು ಘೋಷ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಂದಿನ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಾಯಕರ ನಡುವೆ ವಾಗ್ದಾಳಿಗಳು ಮುಂದುವರೆದಿವೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು