ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30 ವರ್ಷಗಳಲ್ಲಿ ಭಾರತದಲ್ಲಿ ಮದ್ಯ ಸೇವನೆ ಹೆಚ್ಚಳ: ಅಧ್ಯಯನ ವರದಿ

ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಕಳೆದ ಮೂರು ದಶಕಗಳಲ್ಲಿ ಮದ್ಯ ಸೇವನೆ ಹೆಚ್ಚಳವಾಗಿದೆ ಎಂದು ವೈದ್ಯಕೀಯ ನಿಯತಕಾಲಿಕೆ ‘ಲ್ಯಾನ್ಸೆಟ್’ ಅಧ್ಯಯನ ವರದಿಯಿಂದ ತಿಳಿದುಬಂದಿದೆ.

ಪುರುಷರಲ್ಲಿ ವಿವಿಧ ವಯೋಮಾನದವರಲ್ಲಿ ಮದ್ಯ ಸೇವನೆ ಹೆಚ್ಚಾಗಿದೆ. 1990ರಿಂದ ಈವರೆಗೆ 40ರಿಂದ 64 ವರ್ಷ ವಯಸ್ಸಿನವರಲ್ಲಿ ಮದ್ಯ ಸೇವನೆ ಪ್ರಮಾಣ ಶೇ 5.63ರಷ್ಟು ಹೆಚ್ಚಾಗಿದೆ. ಇದೇ ಅವಧಿಯಲ್ಲಿ 15ರಿಂದ 39 ವರ್ಷ ವಯಸ್ಸಿನವರಲ್ಲಿ ಶೇ 5.24ರಷ್ಟು ಹೆಚ್ಚಾಗಿದೆ. 65 ವರ್ಷ ಮೇಲ್ಪಟ್ಟವರಲ್ಲಿ ಶೇ 2.88ರಷ್ಟು ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

ಮತ್ತೊಂದೆಡೆ, ಮಹಿಳೆಯರಲ್ಲಿ 15ರಿಂದ 39 ವರ್ಷ ವಯಸ್ಸಿನವರಲ್ಲಿ ಮದ್ಯ ಸೇವನೆ ಪ್ರಮಾಣ ಶೇ 0.08ರಷ್ಟು ಹೆಚ್ಚಾಗಿದೆ. 40ರಿಂದ 64 ವರ್ಷ ವಯಸ್ಸಿನವರಲ್ಲಿ ಶೇ 0.15ರಷ್ಟು ಹೆಚ್ಚಾಗಿದೆ. 65 ವರ್ಷ ಮೇಲ್ಪಟ್ಟ ಮಹಿಳೆಯರಲ್ಲಿ ಮಾತ್ರ ಮದ್ಯ ಸೇವನೆ ಪ್ರಮಾಣ ಇಳಿಕೆಯಾಗಿದೆ.

ಮದ್ಯ ಸೇವನೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮದ ಬಗ್ಗೆಯೂ ಅಧ್ಯಯನ ಲೆಕ್ಕಾಚಾರ ಹಾಕಿದೆ. ಮದ್ಯಪಾನ ಮಾಡದವರ ಜತೆ ಹೋಲಿಸಿದರೆ ಮದ್ಯಪಾನ ಮಾಡುವವರ ಆರೋಗ್ಯಕ್ಕಿರುವ ಅಪಾಯಗಳ ಬಗ್ಗೆ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT