ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಪತ್ತೆಯಾಗಿದ್ದ ಕ್ರಿಕೆಟಿಗ ಕೇದಾರ್ ಜಾಧವ್ ತಂದೆ ಪತ್ತೆ: ಪುಣೆ ಪೊಲೀಸರು

Last Updated 30 ಮಾರ್ಚ್ 2023, 6:19 IST
ಅಕ್ಷರ ಗಾತ್ರ

ನವದೆಹಲಿ: ಟೀಮ್ ಇಂಡಿಯಾ ಆಟಗಾರ ಕೇದಾರ್ ಜಾಧವ್ ಅವರ ತಂದೆ ಮಹದೇವ್ ಸೋಪಾನ್ ಅವರು ಪತ್ತೆಯಾಗಿದ್ದಾರೆ ಎಂದು ಪುಣೆ ಪೊಲೀಸರು ತಿಳಿಸಿದ್ದಾರೆ.

75 ವರ್ಷದ ಮಹದೇವ್ ಸೋಪಾನ್ ಜಾಧವ್‌ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪುಣೆಯ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸೋಪಾನ್ ಜಾಧವ್‌ ಅವರು ಸೋಮವಾರ ಬೆಳಿಗ್ಗೆ ಮನೆಯವರಿಗೆ ಮಾಹಿತಿ ನೀಡದೆ ಹೊರಗಡೆ ಹೋಗಿದ್ದರು. ಹೆಚ್ಚು ಸಮಯದವರೆಗೆ ಮನೆಗೆ ವಾಪಸ್‌ ಆಗಿರಲಿಲ್ಲ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಸೋಪಾನ್ ಜಾಧವ್‌ ಭಾವಚಿತ್ರ, ಮಾಹಿತಿಯನ್ನು ಪುಣೆ ನಗರದ ಇತರ ಪೊಲೀಸ್ ಠಾಣೆಗಳಿಗೆ ರವಾನಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು.

ಮುಂಡ್ವಾ ಪ್ರದೇಶದ ಘೋರ್ಪಾಡಿ ಗಾಂವ್‌ನಲ್ಲಿ ಸೋಪಾನ್ ಜಾಧವ್‌ ಕಾಣಿಸಿಕೊಂಡಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು ಸೋಪಾನ್ ಅವರನ್ನು ಪತ್ತೆಹಚ್ಚಿದ್ದರು.

ಶೀಘ್ರ ಕಾರ್ಯಾಚರಣೆ ನಡೆಸಿದ ಪೊಲೀಸರಿಗೆ ಕ್ರಿಕೆಟಿಗ ಕೇದಾರ್ ಜಾಧವ್, ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ.

ಇವನ್ನೂ ಓದಿ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT