ಮಂಗಳವಾರ, ಆಗಸ್ಟ್ 9, 2022
20 °C

ಹಜ್‌ ಯಾತ್ರೆ: ಈ ವರ್ಷದ ಎಲ್ಲ ಅರ್ಜಿಗಳು ರದ್ದು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಸಕ್ತ ಸಾಲಿನ ಹಜ್‌ ಯಾತ್ರೆಗಾಗಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಹಜ್‌ ಸಮಿತಿ ಮಂಗಳವಾರ ತಿಳಿಸಿದೆ.

ಕೋವಿಡ್‌–19 ಪಿಡುಗಿನ ಹಿನ್ನೆಲೆಯಲ್ಲಿ ಇತರ ದೇಶಗಳ ಪ್ರಜೆಗಳಿಗೆ ಹಜ್‌ ಯಾತ್ರೆ ಕೈಗೊಳ್ಳಲು ಅನುಮತಿ ನೀಡುವುದಿಲ್ಲ ಎಂದು ಸೌದಿ ಅರೇಬಿಯಾ ತಿಳಿಸಿದೆ.  ಹೀಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಕ್ಸೂದ್‌ ಅಹ್ಮದ್‌ ಖಾನ್‌ ತಿಳಿಸಿದ್ದಾರೆ.

‘ಹಜ್‌ ಯಾತ್ರೆಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ತನ್ನ ಪ್ರಜೆಗಳನ್ನು ಹೊರತುಪಡಿಸಿ ಇತರ ದೇಶಗಳ ಜನರಿಗೆ ಯಾತ್ರೆ ಕೈಗೊಳ್ಳಲು ಅನುಮತಿ ನೀಡುವುದಿಲ್ಲ ಎಂದು ಸೌದಿ ಅರೇಬಿಯಾ ಹೇಳಿದೆ. ಕೋವಿಡ್‌ ಪಿಡುಗಿನ ಈ ಸಂದರ್ಭದಲ್ಲಿ ಇದು ಒಳ್ಳೆಯ ನಿರ್ಧಾರ’ ಎಂದು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್‌ ಅಬ್ಬಾಸ್‌ ನಖ್ವಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು