ಭಾನುವಾರ, ಜನವರಿ 23, 2022
24 °C

ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತ: ಸೂಕ್ತ ಪರಿಹಾರಕ್ಕೆ ಕ್ರಮ– ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ವೈಷ್ಣೋದೇವಿ ದೇವಾಲಯದ ಭವನದ ಸಂಕೀರ್ಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಘಟನೆಯಲ್ಲಿ ಗಾಯಗೊಂಡವರಿಗೆ ಪರಿಹಾರ ನೀಡಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಶನಿವಾರ ಹೇಳಿದರು.

ಪಿಎಂ-ಕಿಸಾನ್ ಯೋಜನೆಯಡಿ ರೈತರಿಗೆ ಹಣ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದೆ. ಪರಿಹಾರ ಕಾರ್ಯಗಳಿಗಾಗಿ ಸಂಪೂರ್ಣ ನಿಗಾ ವಹಿಸಲಾಗುತ್ತಿದೆ ಎಂದು ಮೋದಿ ಹೇಳಿದರು.

‘ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರ ನೀಡಲಾಗುವುದು. ಮೃತಪಟ್ಟವರ ಕುಟುಂಬಗಳಿಗೆ ತಲಾ ₹ 2 ಲಕ್ಷ, ಗಾಯಾಳುಗಳಿಗೆ ₹ 50,000 ಪರಿಹಾರ ನೀಡಲಾಗುವುದು’ ಎಂದು ಪ್ರಧಾನಿ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಯುವಕರ ನಡುವಿನ ಸಣ್ಣ ಜಗಳವೇ ವೈಷ್ಣೋ ದೇವಿ ದೇಗುಲದ ಕಾಲ್ತುಳಿತಕ್ಕೆ ಕಾರಣ- ಡಿಜಿಪಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು