ಸೋಮವಾರ, ಜುಲೈ 4, 2022
24 °C

ರಾಜ್ಯಸಭೆ: ಎಎಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ನಿಂದ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. 

ಮಾಜಿ ಕ್ರಿಕೆಟಿಗ ಹರಭಜನ್ ಸಿಂಗ್, ಪಕ್ಷದ ಮುಖಂಡ ರಾಘವ್ ಛಡ್ಡಾ, ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಸಂಸ್ಥಾಪಕ ಅಶೋಕ್ ಮಿತ್ತಲ್, ದೆಹಲಿ ಐಐಟಿ ಸಹ ಪ್ರಾಧ್ಯಾಪಕ ಸಂದೀಪ್ ಪಾಠಕ್ ಹಾಗೂ ಉದ್ಯಮಿ ಸಂಜೀವ್ ಅರೋರಾ ಅವರು ಮಾರ್ಚ್ 31ರ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು.

ನಾಮಪತ್ರ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಬೇರೆ ಪಕ್ಷದ ಯಾವ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿರಲಿಲ್ಲ. ಹೀಗಾಗಿ ಎಎಪಿಯ ಎಲ್ಲ ಐದು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಸುರಿಂದರ್ ಪಾಲ್ ಹೇಳಿದ್ದಾರೆ. 

ಶಿರೋಮಣಿ ಅಕಾಲಿದಳದ ಸುಖದೇವ್ ಧಿಂಡ್ಸಾ ಹಾಗೂ ನರೇಶ್ ಗುಜ್ರಾಲ್, ಕಾಂಗ್ರೆಸ್‌ನ ಪ್ರತಾಪ್ ಸಿಂಗ್ ಬಾಜ್ವಾ ಹಾಗೂ ಶಂಶೇರ್ ಸಿಂಹ ದೂಲೊ, ಬಿಜೆಪಿಯ ಶ್ವೇತ್ ಮಲಿಕ್ ಅವರ ರಾಜ್ಯಸಭಾ ಸದಸ್ಯತ್ವದ ಅವಧಿಯು ಏಪ್ರಿಲ್ 9ರಂದು ಕೊನೆಗೊಳ್ಳಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು