ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ವರ್ಷ ಮೇಲ್ಪಟ್ಟ ಎಲ್ಲರಿಗೂ ಇದೇ 10ರಿಂದ ಬೂಸ್ಟರ್‌ ಡೋಸ್‌

Last Updated 8 ಏಪ್ರಿಲ್ 2022, 10:28 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಲಸಿಕೆಯ ಎರಡು ಡೋಸ್‌ಗಳನ್ನು ಪಡೆದು 9 ತಿಂಗಳಾಗಿರುವ, 18 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯರಿಗೆ ಬೂಸ್ಟರ್ ಡೋಸ್‌ಗಳನ್ನು ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿದೆ.

ಮುಂಜಾಗ್ರತಾ ಡೋಸ್ ಎಂದು ಕರೆಯಲ್ಪಡುವ ಬೂಸ್ಟರ್‌ ಡೋಸ್‌ಗಳನ್ನು ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳ ಮೂಲಕ ನೀಡಲಾಗುತ್ತದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವರೆಗೆ, ಕೋವಿಡ್‌ ವಾರಿಯರ್‌ಗಳು ಮತ್ತು 60 ವರ್ಷ ಮೇಲ್ಪಟ್ಟವರು ಮಾತ್ರ ಬೂಸ್ಟರ್ ಪಡೆಯಲು ಅರ್ಹರಾಗಿದ್ದರು. ಇನ್ನು ಮುಂದೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ನೀಡಲು ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT