ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಂತರ ವೈರಸ್: ವಿಮಾನ ಪ್ರಯಾಣಿಕರಿಗೆ ಪರಿಷ್ಕೃತ ಎಸ್‌ಒಪಿ

Last Updated 2 ಜನವರಿ 2021, 11:00 IST
ಅಕ್ಷರ ಗಾತ್ರ

ನವದೆಹಲಿ: ಬ್ರಿಟನ್‌ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಈಗಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ(ಎಸ್‌ಒಪಿ)ವನ್ನು ಪರಿಷ್ಕರಿಸಿದೆ.

ಪರಿಷ್ಕೃತ ಎಸ್‌ಒಪಿ ಪ್ರಕಾರ ಎಲ್ಲ ಪ್ರಯಾಣಿಕರು ತಾವೇ ಹಣ ಪಾವತಿಸಿ ‘ಕೋವಿಡ್‌ 19‘ ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದಲ್ಲದೇ, ಬ್ರಿಟನ್‌ನಿಂದ ಬರುವ ‌ಪ್ರತಿಯೊಬ್ಬ ಪ್ರಯಾಣಿಕನೂ, ಪ್ರಯಾಣಕ್ಕೆ 72 ಗಂಟೆಗಳ ಮೊದಲು ಕೋವಿಡ್‌ ಪರೀಕ್ಷೆ ಮಾಡಿಸಿ, ನೆಗೆಟಿವ್ ವರದಿ ತರಬೇಕು.

ಕೇಂದ್ರ ಸರ್ಕಾರ, ಈಗಾಗಲೇ ಡಿಸೆಂಬರ್ 23ರಿಂದ ಡಿಸೆಂಬರ್ 31ರವರೆಗೆ ಬ್ರಿಟನ್‌ ವಿಮಾನಗಳಿಗೆ ನಿರ್ಬಂಧ ವಿಧಿಸಿತ್ತು. ನಂತರ ಆ ನಿರ್ಬಂಧವನ್ನು ಜ.7 ವರೆಗೆ ವಿಸ್ತರಿಸಿದೆ.

ವಿಮಾನ ಸಂಚಾರ ಪುನರಾರಂಭವಾದರೂ, ವಾರಕ್ಕೆ 30 ವಿಮಾನಗಳ ಸಂಚಾಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಈಗ ವಿಧಿಸಿರುವ ನಿಬಂಧನೆಗಳ ಅನ್ವಯ ಈಗಿರುವ ವ್ಯವಸ್ಥೆಯಲ್ಲೇ ಜ.23 ರವರೆಗೆ ವಿಮಾನ ಸಂಚಾರ ಮುಂದುವರಿಯುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವ ಹರದೀಪ್‌ಸಿಂಗ್‌ ಪುರಿ ತಿಳಿಸಿದ್ದಾರೆ.

‘ಪ್ರಯಾಣಿಕರ ಬಳಿ ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ವಿಮಾನ ಯಾನ ಸಂಸ್ಥೆಗಳು ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನೀಡುತ್ತವೆ. ಒಂದೊಮ್ಮೆ ಪ್ರಯಾಣಿಕರಿಗೆ ಕೊರೊನ ಸೋಂಕು ದೃಢಪಟ್ಟರೆ, ಅಂಥವರನ್ನು ಆಯಾ ರಾಜ್ಯ ಸರ್ಕಾರಗಳು ನಿಗದಿಪಡಿಸಿರುವ ಸಾಂಸ್ಥಿಕ ಕ್ವಾರಂಟೈನ್‌ ಕೇಂದ್ರಗಳಿಗೆ ಕಳುಹಿಸಲು ಎಸ್‌ಒಪಿಯಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT