ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯಾಸ್‌’ ಚಂಡಮಾರುತ ಎದುರಿಸಲು ಪಶ್ಚಿಮ ಬಂಗಾಳ ಸಿದ್ಧತೆ

ಕಂಟ್ರೋಲ್‌ ರೂಂನಲ್ಲಿ ಉಳಿಯಲಿರುವ ಮಮತಾ ಬ್ಯಾನರ್ಜಿ
Last Updated 23 ಮೇ 2021, 6:08 IST
ಅಕ್ಷರ ಗಾತ್ರ

ಕೋಲ್ಕತ್ತ: ಮೇ 26ರಂದು ಪಶ್ಚಿಮ ಬಂಗಾಳವನ್ನು ಹಾದುಹೋಗಲಿರುವ ‘ಯಾಸ್‌’ ಚಂಡಮಾರುತವನ್ನು ಎದುರಿಸಲು ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪರಿಸ್ಥಿತಿ ನಿರ್ವಹಣೆಗಾಗಿ ಕಂಟ್ರೋಲ್‌ ರೂಂನಲ್ಲೇ ಉಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ಅವರು,‘ಚಂಡಮಾರುತದ ಪ್ರಭಾವಕ್ಕೆ ಒಳಗಾಗುವ ಪ್ರದೇಶಗಳಿಗೆ ಪರಿಹಾರ ಸಾಮಗ್ರಿಗಳನ್ನು ರವಾನಿಸಲಾಗಿದ್ದು, ಕರಾವಳಿ ಮತ್ತು ನದಿ ಪ್ರದೇಶಗಳಿಂದ ಆದಷ್ಟು ಬೇಗ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳಿಗೆ ಸಂಬಂಧಿಸಿದ ಹಿರಿಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದೇನೆ’ ಎಂದು ಮಮತಾ ಬ್ಯಾನರ್ಜಿ ಟ್ವೀಟ್‌ ಮಾಡಿದ್ದಾರೆ.

ಯಾಸ್‌ ಚಂಡಮಾರುತವುಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳವನ್ನು ಹಾದು ಹೋಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT