ಶುಕ್ರವಾರ, ಡಿಸೆಂಬರ್ 2, 2022
20 °C

ದಾಂಪತ್ಯ ಕಲಹ, ಜಾಮೀನು ಅರ್ಜಿಗಳ ನಿತ್ಯ ವಿಚಾರಣೆ: ಸಿಜೆಐ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದಾಂಪತ್ಯ ಕಲಹ ಮತ್ತು ಜಾಮೀನಿಗೆ ಸಂಬಂಧಿಸಿದ ತಲಾ ಹತ್ತು ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನ ಎಲ್ಲಾ 13 ನ್ಯಾಯಪೀಠಗಳು ಪ್ರತಿದಿನ ವಿಚಾರಣೆ ನಡೆಸಲಿವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಶುಕ್ರವಾರ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಭೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ.

ಚಳಿಗಾಲದ ರಜೆಗಿಂತ ಮೊದಲು ಈ ವಿಷಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಾಮೀನು ವಿಚಾರವು ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿರುವುದರಿಂದ ಅವುಗಳಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದೂ ಅವರು ವಿವರಿಸಿದ್ದಾರೆ. 

ಪ್ರತಿದಿನ ಈ ಪ್ರಕರಣಗಳ ವಿಚಾರಣೆ ನಡೆಸಿದ ಬಳಿಕ ನ್ಯಾಯಪೀಠಗಳು ಸಾಮಾನ್ಯ ಪ್ರಕರಣಗಳ ವಿಚಾರಣೆ ನಡೆಸಲಿವೆ ಎಂದೂ ಚಂದ್ರಚೂಡ್‌ ಅವರು ಸ್ಪಷ್ಟಪಡಿಸಿದ್ದಾರೆ.

ವೈವಾಹಿಕ ಪ್ರಕರಣಗಳನ್ನು ತಮ್ಮ ಇಚ್ಛೆಯ ಸ್ಥಳಗಳಿಗೆ ವರ್ಗಾಹಿಸಬೇಕೆಂದು ಕೋರಿ ಸಲ್ಲಿಕೆಯಾಗಿರುವ 3,000 ಅರ್ಜಿಗಳ ವಿಚಾರಣೆ ಈವರೆಗೆ ಬಾಕಿ ಉಳಿದಿವೆ ಎಂದು ನ್ಯಾಯಪೀಠ ಹೇಳಿದೆ.

ಓದಿ... ಬೀದಿ ನಾಯಿ ಪೋಷಣೆ ಎಂದರೆ ಸಾರ್ವಜನಿಕರಿಗೆ ತೊಂದರೆ ನೀಡುವುದಲ್ಲ: ಸುಪ್ರೀಂ ಕೋರ್ಟ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು