ಗುರುವಾರ , ಮೇ 19, 2022
21 °C

ಶಬರಿಮಲೆ ಅಯ್ಯಪ್ಪ ದೇಗುಲ ನವೆಂಬರ್‌ 16ರಿಂದ ಭಕ್ತರ ದರ್ಶನಕ್ಕೆ ಮುಕ್ತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪತನಂತಿಟ್ಟಾ, ಕೇರಳ: ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಬಾಗಿಲು ಮುಂದಿನ ವಾರ ತೆರೆಯಲಿದ್ದು, ಇದರೊಂದಿಗೆ ಎರಡು ತಿಂಗಳ ವಾರ್ಷಿಕ ಧಾರ್ಮಿಕ ಯಾತ್ರೆ ಅವಧಿಯೂ ಆರಂಭವಾಗಲಿದೆ. ಈ ವೇಳೆ ನಿತ್ಯ ಸುಮಾರು 30 ಸಾವಿರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ 16ರಂದು ಧಾರ್ಮಿಕ ಯಾತ್ರೆ ಅವಧಿ ಆರಂಭವಾಗಲಿದೆ. ನ.15ರಂದು ಸಂಜೆ 5ಕ್ಕೆ ದೇವಸ್ಥಾನದ ಬಾಗಿಲು ತೆರೆಯಲಿದೆ. ಮುಖ್ಯ ಅರ್ಚಕ ಕಂದರಾರು ಮಹೇಶ್‌ ಮೋಹನರಾರು ಉಪಸ್ಥಿತಿಯಲ್ಲಿ ನಿರ್ಗಮಿತ ಅರ್ಚಕ ವಿ.ಕೆ.ಜಯರಾಜ್‌ ಪೊಟ್ಟಿ ದೇಗುಲದ ಬಾಗಿಲು ತೆರೆಯುವರು.

ಅಯ್ಯಪ್ಪ ಮತ್ತು ಮಲ್ಲಿಕಪುರಂ ದೇವಸ್ಥಾನಗಳಿಗೆ ನೂತನ ಅರ್ಚಕರ ನೇಮಕ ಕಾರ್ಯಕ್ರಮವೂ ಬೆಟ್ಟದಲ್ಲಿ ಅದೇ ದಿನ ನಡೆಯಲಿದೆ. ಕೋವಿಡ್ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಈ ಕಾರ್ಯಕ್ರಮಗಳು ನಡೆಯಲಿವೆ. ಎರಡು ಡೋಸ್ ಲಸಿಕೆ ಪಡೆದಿರುವುದು ಅಥವಾ ಆರ್‌ಟಿ–ಪಿಸಿಆರ್ ನಗೆಟಿವ್ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯವಾಗಿದೆ. ಭಕ್ತರು ಆಧಾರ್‌ನ ಮೂಲಪತ್ರವನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಪ ನದಿಯಲ್ಲಿ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಆದರೆ, ಆ ಸ್ಥಳದಲ್ಲಿ ವಾಹನ ನಿಲುಗಡೆಗೆ ಹಾಗೂ ಪಂಪ ಮತ್ತು ಸನ್ನಿಧಾನಂ ಭಕ್ತರು ನೆಲೆಯೂರಲು ಅವಕಾಶ ಇರುವುದಿಲ್ಲ. ದರ್ಶನದ ನಂತರ ಸ್ಥಳದಿಂದ ನಿರ್ಗಮಿಸುವುದು ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು