ಗುರುವಾರ , ಮೇ 6, 2021
25 °C

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ನಿವಾಸದ ಸಿಬ್ಬಂದಿಗೆ ಕೋವಿಡ್‌ ದೃಢ

ಪಿಟಿಐ‌ Updated:

ಅಕ್ಷರ ಗಾತ್ರ : | |

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಂ.ಆರ್‌. ಷಾ ಅವರ ಅಧಿಕೃತ ನಿವಾಸದಲ್ಲಿರುವ ಎಲ್ಲ ಸಿಬ್ಬಂದಿಗೂ ಕೋವಿಡ್‌ 19 ಸೋಂಕು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಅವರು ಪ್ರಕರಣವೊಂದರ ವಿಚಾರಣೆ ವೇಳೆ ತಿಳಿಸಿದ್ದಾರೆ.

ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ನೇತೃತ್ವದ ಪೀಠದಲ್ಲಿ ಇರುವ ನ್ಯಾಯಮೂರ್ತಿ ಷಾ ಅವರು ಅಧಿಕೃತ ನಿವಾಸದಲ್ಲಿರುವ ಎಲ್ಲ ಸಿಬ್ಬಂದಿಗೆ ವೈರಲ್ ಸೋಂಕು ತಗುಲಿದೆ ಎಂದು ವಕೀಲರ ಎದುರೇ ತಿಳಿಸಿದರು.

‘ಸದ್ಯದ ಪರಿಸ್ಥಿತಿಯನ್ನು ನಿಭಾಹಿಸಲು ನ್ಯಾಯಾಲಯಕ್ಕೂ ತನ್ನದೇ ಆದ ಸಮಯ ಹಿಡಿಯಲಿದೆ‘ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭತಿ ಹೇಳಿದರು.

ಕೆಲ ದಿನಗಳ ಹಿಂದೆ ಸುಪ್ರೀಂ ಕೋರ್ಟ್‌ನ ಸುಮಾರು 40 ಸಿಬ್ಬಂದಿಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು