ನವದೆಹಲಿ: ದೆಹಲಿಯಲ್ಲಿ ನಡೆದ 17 ವರ್ಷದ ಬಾಲಕಿಯ ಮೇಲಿನ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಬಂಧಿಸಲಾಗಿದೆ ಎಂದು ದ್ವಾರಕಾ ವಿಭಾಗದ ಡಿಸಿಪಿ ಎಂ.ಹರ್ಷವರ್ಧನ್ ಮಾಹಿತಿ ಹಂಚಿಕೊಂಡಿದ್ದಾರೆ.
ಪಶ್ಚಿಮ ದೆಹಲಿಯ ಉತ್ತಮ್ ನಗರದ ಮೋಹನ್ ಗಾರ್ಡನ್ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿ ಮೇಲೆ ಆಸಿಡ್ ಮಾದರಿಯ ರಾಸಾಯನಿಕ ದ್ರವ ಎರಚಿ ಪರಾರಿಯಾಗಿದ್ದರು.
‘ಸಂತ್ರಸ್ತ ಬಾಲಕಿಗೆ 17 ವರ್ಷ ವಯಸ್ಸು. ಆಕೆ ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ತನ್ನ ತಂಗಿಯ ಜೊತೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ಮಾದರಿಯ ರಾಸಾಯನಿಕ ದ್ರವ ಎರಚಿದ್ದಾಗಿ ಗೊತ್ತಾಗಿದೆ. ಮೋಹನ್ ಗಾರ್ಡನ್ ಠಾಣೆಯ ಅಧಿಕಾರಿಗಳಿಗೆ ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಕುರಿತ ಮಾಹಿತಿ ಲಭಿಸಿತ್ತು’ ಎಂದು ಎಂ.ಹರ್ಷವರ್ಧನ್ ತಿಳಿಸಿದ್ದಾರೆ.
ದುಷ್ಕರ್ಮಿಗಳು ಬಾಲಕಿ ಮೇಲೆ ರಾಸಾಯನಿಕ ದ್ರವ ಎರಚುತ್ತಿರುವ ದೃಶ್ಯವು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಇವನ್ನೂ ಓದಿ...
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.