ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾನ್‌ಫ್ರಾನ್ಸಿಸ್ಕೊ–ಬೆಂಗಳೂರು ವಿಮಾನ: ‘ಏರ್‌ ಇಂಡಿಯಾ’ದಲ್ಲಿ ಮಹಿಳಾ ಸಾರಥ್ಯ

ಜೋಯಾ ಅಗರ್‌ವಾಲ್‌ ಸಾರಥ್ಯ, ಉತ್ತರ ಧೃವದ ಮೇಲೆ ಹಾರಲಿರುವ ವಿಮಾನ
Last Updated 9 ಜನವರಿ 2021, 7:46 IST
ಅಕ್ಷರ ಗಾತ್ರ

ನವದೆಹಲಿ: ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ, ಬೆಂಗಳೂರು – ಸ್ಯಾನ್‌ ಫ್ರಾನ್ಸಿಸ್ಕೊ ನಡುವೆ ನೇರ ವಿಮಾನ ಸಂಚಾರ ಆರಂಭಿಸಿದ್ದು, ಶನಿವಾರ ರಾತ್ರಿಯಿಂದ ಸ್ಯಾನ್‌ ಫ್ರಾನ್ಸಿಸ್ಕೊದಿಂದ ಮೊದಲ ವಿಮಾನ ಸಂಚಾರ ಆರಂಭವಾಗಲಿದೆ.

‘ಏರ್‌ ಇಂಡಿಯಾದ ಮಹಿಳಾ ಪೈಲಟ್‌ಗಳ ತಂಡ ಮೊದಲ ವಿಮಾನ ಸಂಚಾರದ ಜವಾಬ್ದಾರಿ ನಿರ್ವಹಿಸಲಿದೆ‘ ಎಂದು ಶನಿವಾರ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

‘ಕ್ಯಾಪ್ಟನ್ ಜೋಯಾ ಅಗರ್‌ವಾಲ್‌ ನೇತೃತ್ವದ ಮಹಿಳಾ ಪೈಲಟ್ ತಂಡ ಶನಿವಾರ ಸ್ಯಾನ್‌ ಫ್ರಾನ್ಸಿಸ್ಕೊದಿಂದ ಮೊದಲ ವಿಮಾನ ಸಂಚಾರ ಆರಂಭಿಸಿದೆ. ಈ ವಿಮಾನವು ಉತ್ತರ ಧ್ರುವದ ಮೇಲೆ ಹಾರಿ, ಅಟ್ಲಾಂಟಿಕ್ ಮಾರ್ಗದ ಮೂಲಕ ಬೆಂಗಳೂರಿಗೆ ತಲುಪಲಿದೆ‘ ಎಂದು ವಿಮಾನಯಾನ ಸಂಸ್ಥೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

‘ಕ್ಯಾಪ್ಟನ್ ಜೋಯಾ ಅಗರ್‌ವಾಲ್‌, ಕ್ಯಾಪ್ಟನ್ ಪಾಪಗರಿ ತನ್ಮೈ, ಕ್ಯಾಪ್ಟನ್ ಆಕಾಶಾ ಸೋನಾವೇರ್ ಮತ್ತು ಕ್ಯಾಪ್ಟನ್ ಶಿವಾನಿ ಮನ್ಹಾಸ್ ಅವರನ್ನೊಳಗೊಂಡ ತಂಡವು ಈ ಉದ್ಘಾಟನಾ ವಿಮಾನ ಸಂಚಾರದ ಸಾರಥ್ಯವಹಿಸಲಿದೆ‘ ಎಂದು ಸಚಿವ ಪುರಿ ಟ್ವೀಟ್‌ ಮಾಡಿದ್ದಾರೆ.

ಸ್ಯಾನ್‌ ಫ್ರಾನ್ಸಿಸ್ಕೊ – ಬೆಂಗಳೂರು ನಡುವಿನ ವೈಮಾನಿಕ ಅಂತರವು ವಿಶ್ವದ ಅತ್ಯಂತ ಧೀರ್ಘ ವಾಯು ಮಾರ್ಗವಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಿಮಾನಗಳು ಭೂಮಿಯ ಮೇಲಿನ ದುರ್ಗಮ ಪ್ರದೇಶ ಎನ್ನುವ ಉತ್ತರ ಧೃವವನ್ನು ದಾಟಿ ಬರುತ್ತವೆ.

ಉದ್ಘಾಟನಾ ವಿಮಾನ ಎಐ 176 ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೊದಿಂದ ಶನಿವಾರ ರಾತ್ರಿ 8.30ಕ್ಕೆ (ಸ್ಥಳೀಯ ಸಮಯ) ಹೊರಡಲಿದ್ದು, ಸೋಮವಾರ (ಸ್ಥಳೀಯ ಸಮಯ) ಮುಂಜಾನೆ 3.45 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT