ಅಲಹಾಬಾದ್ ಹೈಕೋರ್ಟ್‌ನಿಂದ ಡಾ.ಕಫೀಲ್ ಖಾನ್‌ಗೆ ಷರತ್ತು ಬದ್ಧ ಜಾಮೀನು

ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿ ಪ್ರಕರಣ ದಾಖಲಾಗಿ ಬಂಧನಕ್ಕೆ ಒಳಗಾಗಿದ್ದ ಡಾ.ಕಫೀಲ್ ಖಾನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಮಂಗಳವಾರ ಷರತ್ತು ಬದ್ಧ ಜಾಮೀನು ನೀಡಿದೆ.
ಅಲಿಗಢ ಮುಸ್ಲಿಂ ಯೂನಿವರ್ಸಿಟಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆಸಲಾದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರೆಂಬ ಆರೋಪದ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.
ಡಾ.ಕಫೀಲ್ ಖಾನ್ ಬಿಡುಗಡೆಗೆ ಸಂಬಂಧಿಸಿದಂತೆ 15 ದಿನಗಳಲ್ಲಿ ಹೈಕೋರ್ಟ್ ಇತ್ಯರ್ಥಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಜನವರಿಯಲ್ಲಿ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮುಂಬೈನಲ್ಲಿ ಖಾನ್ ಅವರನ್ನು ಬಂಧಿಸಿತ್ತು. 2019ರ ಡಿಸೆಂಬರ್ 12ರಂದು ಸಿಎಎ ವಿರುದ್ಧ ನಡೆದಿದ್ದ ಪ್ರತಿಭಟನೆ ವೇಳೆ ಕಫೀಲ್ ಖಾನ್ ಭಾಷಣ ಮಾಡಿದ್ದರು.
2020ರ ಫೆಬ್ರುವರಿ 14ರಂದು ಅವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿಸಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.