ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬ್ರಿ ಮಸೀದಿ ಧ್ವಂಸ: ಅರ್ಜಿಯ ಸ್ವೀಕಾರಾರ್ಹತೆ–ತೀರ್ಪು ಕಾಯ್ದಿರಿಸಿದ ಪೀಠ

Last Updated 1 ನವೆಂಬರ್ 2022, 14:36 IST
ಅಕ್ಷರ ಗಾತ್ರ

ಲಖನೌ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಮುಖಂಡರಾದ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾ ಭಾರತಿ ಸೇರಿದಂತೆ ಒಟ್ಟು 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ಸ್ವೀಕಾರ ಅರ್ಹತೆ ಕುರಿತ ತೀರ್ಪನ್ನು ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠವು ಕಾಯ್ದಿರಿಸಿದೆ.

ಸಿಬಿಐ ಪರ ವಕೀಲ ಹಾಗೂ ಅರ್ಜಿದಾರರ ವಾದಗಳನ್ನು ಆಲಿಸಿದ ನ್ಯಾಯಮೂರ್ತಿಗಳಾದ ರಮೇಶ್‌ ಸಿನ್ಹಾ ಮತ್ತು ಸರೋಜ್‌ ಯಾದವ್‌ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ತೀರ್ಪು ಕಾಯ್ದಿರಿಸಿರುವುದಾಗಿ ಸೋಮವಾರ ಹೇಳಿದೆ.

‘ಹೈಕೋರ್ಟ್‌ನಲ್ಲಿ ಕ್ರಿಮಿನಲ್‌ ಪರಿಷ್ಕರಣೆ ಮೊಕದ್ದಮೆ ದಾಖಲಿಸಿರುವಅಯೋಧ್ಯೆ ನಿವಾಸಿಗಳಾದ ಹಾಜಿ ಮೆಹಬೂಬ್‌ ಮತ್ತು ಹಾಜಿ ಅಖಲಕ್‌ ಅವರು ವಿಶೇಷ ನ್ಯಾಯಾಲಯದ ತೀರ್ಪನ್ನು ಸಿಬಿಐ ಪ್ರಶ್ನಿಸಿಲ್ಲ. ಹೀಗಾಗಿ ನಾವು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದೇವೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಈ ಪ್ರಕರಣದ ಸಂಬಂಧ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಲು ಅರ್ಜಿದಾರರಿಗೆ ಯಾವುದೇ ಹಕ್ಕಿಲ್ಲ ಎಂದು ಸಿಬಿಐ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT