ಬುಧವಾರ, ಜನವರಿ 19, 2022
24 °C

ರಾಜ್ಯದಲ್ಲಿ ಮಾದರಿ ಬಿಲ್ಡರ್–ಏಜೆಂಟ್‌ ಖರೀದಿ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕರ್ನಾಟಕದಲ್ಲಿ ಈಗಾಗಲೇ ಮಾದರಿ ಬಿಲ್ಡರ್ ಮತ್ತು ಏಜೆಂಟ್ ಖರೀದಿ ಒಪ್ಪಂದವನ್ನು ಅಂಗೀಕರಿಸಲಾಗಿದೆ’ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಕರ್ನಾಟಕ ರಿಯಲ್ ಎಸ್ಟೇಟ್‌ (ನಿಯಂತ್ರಣ ಮತ್ತು ಅಭಿವೃದ್ಧಿ) ಒಪ್ಪಂದ ನಿಯಮಗಳ ಬಗ್ಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ತಿಳಿಸಿದೆ.

ರೆರಾ ಅನ್ವಯ ನೀಡಲಾದ ಆದೇಶವನ್ನು ಕಾಲಮಿತಿಯಲ್ಲಿ ಜಾರಿಗೊಳಿಸಲು ಜಿಲ್ಲಾಧಿಕಾರಿಗಳಿಗೆ ಆದೇಶಿಸಿ 2021ರ ಅಕ್ಟೋಬರ್‌ 30,  ಮತ್ತು 2021ರ ನವೆಂಬರ್ 12 ರಂದು ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ತಿಳಿಸಿದೆ.

ಅಶ್ವಿನಿ ಕುಮಾರ್ ಉಪಾಧ್ಯಾಯ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿರುವ ಕರ್ನಾಟಕ, ವಸ್ತುಸ್ಥಿತಿಗೆ ವಿರುದ್ಧವಾಗಿರುವ ಕಾರಣ ಈ ಅರ್ಜಿಯನ್ನು ವಜಾಮಾಡಬೇಕು ಎಂದು ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು