ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜುಬೈರ್‌ಗೆ ಮಧ್ಯಂತರ ಜಾಮೀನು ವಿಸ್ತರಿಸಿದ ‘ಸುಪ್ರೀಂ’

ಉತ್ತರಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ದಾಖಲಾಗಿದ್ದ ದೂರು ಸಂಬಂಧಿತ ಅರ್ಜಿ
Last Updated 12 ಜುಲೈ 2022, 10:31 IST
ಅಕ್ಷರ ಗಾತ್ರ

ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಉತ್ತರಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ‘ಆಲ್ಟ್‌ನ್ಯೂಸ್‌’ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೈರ್‌ ಅವರ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಮಧ್ಯಂತರ ಜಾಮೀನಿನ ಅವಧಿಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ವಿಸ್ತರಿಸಿದೆ.

ಉತ್ತರಪ್ರದೇಶ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು, ಪ್ರಕರಣದಲ್ಲಿ ಜುಬೈರ್ ಅವರಿಗೆ ಜಾಮೀನು ದೊರೆತಿರುವುದರಿಂದ ಅವರ ವಿರುದ್ಧ ಪ್ರತಿ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡುವಂತೆ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಜುಬೈರ್ ಪರ ಹಾಜರಿದ್ದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್ ಅವರು, ರಾಜ್ಯ ಸರ್ಕಾರ ಸಲ್ಲಿಸಲಿರುವ ಪ್ರತಿ ಅಫಿಡವಿಟ್‌ಗೆ ತಮ್ಮ ಉತ್ತರವನ್ನು ಸಲ್ಲಿಸಲು ಬಯಸುತ್ತೇವೆ ಎಂದು ಹೇಳಿದರು.

ಅಂತಿಮ ವಿಚಾರಣೆಯನ್ನು ಸೆಪ್ಟೆಂಬರ್ 7ರಂದು ನಡೆಸುವುದಾಗಿ ತಿಳಿಸಿದ ನ್ಯಾಯಪೀಠವು, ಉತ್ತರಪ್ರದೇಶ ಸರ್ಕಾರಕ್ಕೆ ನಾಲ್ಕು ವಾರದೊಳಗೆ ತನ್ನ ಪ್ರತಿಕ್ರಿಯೆ ಸಲ್ಲಿಸಬೇಕೆಂದು ಸೂಚಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT