ಕಾಯ್ದೆ ವಾಪಸು ಪಡೆಯಲು ಪಂಜಾಬ್ ಮುಖ್ಯಮಂತ್ರಿ ಮನವಿ

ಪಟಿಯಾಲ: ಕೃಷಿ ತಿದ್ದುಪಡಿ ಕಾಯ್ದೆಯು ಸರಿಯಾದುದಲ್ಲ ಎಂದು ಅಭಿಪ್ರಾಯಪಟ್ಟಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು, ನೂತನ ಕಾಯ್ದೆಗಳನ್ನು ವಾಪಸು ಪಡೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ವಯಸ್ಸಾಗಿರುವ ರೈತರು ಗಡಿ ಭಾಗದಲ್ಲಿ ಧರಣಿ ಕುಳಿತಿದ್ದಾರೆ. ಈ ಧರಣಿ ಅವರಿಗಾಗಿಯಲ್ಲ, ಅವರ ಮಕ್ಕಳು ಮತ್ತು ಭವಿಷ್ಯದ ಪೀಳಿಗೆಗಾಗಿ. ಸಂವಿಧಾನದ 7ನೇ ಪರಿಚ್ಛೇದ ಅನುಸಾರ ಕೃಷಿ ಎಂದಿಗೂ ರಾಜ್ಯದ ವಿಷಯವಾಗಿದ್ದು, ಕೇಂದ್ರ ರೂಪಿಸಿರುವ ಕಾಯ್ದೆ ಸರಿಯಾದುದಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿಯಲ್ಲಿ ರೈತರು–ಪೊಲೀಸರ ಘರ್ಷಣೆ: ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ರೈತರು
ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿದ ಅವರು, ಕೃಷಿಕರ ಬೇಡಿಕೆಯನ್ನು ಈಡೇರಿಸಬೇಕು ಎಂಬುದು ನನ್ನ ಮನವಿ ಎಂದರು. ಶಾಂತಿ ಕಾಪಾಡಿಕೊಳ್ಳಿ, ದೇಶ ನಿಮ್ಮೊಂದಿಗೆ ಇದೆ ಎಂದು ಪ್ರತಿಭಟನನಿರತ ರೈತರಿಗೆ ಮನವಿ ಮಾಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.